ನವದೆಹಲಿ: ದೇಶದಾದ್ಯಂತ ಕೋವಿಡ್–19 ಲಸಿಕಾ ಅಭಿಯಾನ ಆರಂಭಿಸುವ ಬಗ್ಗೆ ಯೋಜನೆ ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಜ.11 ರಂದು ವಿಡಿಯೊ ಸಂವಾದ ನಡೆಸಲಿದ್ದಾರೆ.

‘ಸೋಮವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳ ಜತೆಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ. ಕೋವಿಡ್ ಪರಿಸ್ಥಿತಿ ಹಾಗೂ ಲಸಿಕೆ ಅಭಿಯಾನ ಆರಂಭಿಸುವ ವಿಚಾರವಾಗಿ ಚರ್ಚೆ ನಡೆಯಲಿದೆ’ ಎಂದು ಪ್ರಧಾನಿ ಕಚೇರಿಯು ಶುಕ್ರವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳನ್ನು ದೇಶದಲ್ಲಿ ತುರ್ತು ಸಂದರ್ಭದ ಬಳಕೆಗೆ ಇತ್ತೀಚೆಗಷ್ಟೇ ಅನುಮತಿ ನೀಡಲಾಗಿದೆ. ಲಸಿಕೆಯ ಬಾಟಲುಗಳನ್ನು ಎಲ್ಲಾ ರಾಜ್ಯಗಳ ರಾಜಧಾನಿಗಳಿಗೆ ಕಳುಹಿಸುವ ಕೆಲಸವನ್ನು ಕೇಂದ್ರವು ಈಗಾಗಲೇ ಆರಂಭಿಸಿದೆ. ಮುಂದಿನ ವಾರದಲ್ಲಿ ಲಸಿಕಾ ಅಭಿಯಾನ ಆರಂಭಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.