ಶುಕ್ರವಾರ, ಮೇ 14, 2021
32 °C

ಪಶ್ಚಿಮ ಬಂಗಾಳ ಚುನಾವಣೆ: ದಾಖಲೆ ಪ್ರಮಾಣದ ಮತದಾನಕ್ಕೆ ಮೋದಿ ಮನವಿ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ‍ಪ್ರಾರಂಭವಾಗಿದ್ದು, ಜನರು ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಬೇಕು’ ಎಂದು ಪ್ರಧಾನಿ ಮೋದಿ ಅವರು ಜನರಲ್ಲಿ ಕೋರಿದ್ದಾರೆ.

‘ಪಶ್ಚಿಮ ಬಂಗಾಳದಲ್ಲಿ ಜನರು ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಬೇಕು. ವಿಶೇಷವಾಗಿ ಯುವಕರು ಮತ್ತು ಮಹಿಳೆಯರು ಹೆಚ್ಚಿನ ‍ಪ್ರಮಾಣದಲ್ಲಿ ಮತ ಚಲಾಯಿಸಬೇಕು’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಸದ್ಯ ಮೂರು ಹಂತಗಳು ಮುಗಿದಿವೆ.

44 ಸ್ಥಾನಗಳಿಗಾಗಿ ನಾಲ್ಕನೇ ಹಂತದ ಮತದಾನ ಆರಂಭವಾಗಿದೆ.  ಮೇ 2 ರಂದು ಮತ ಎಣಿಕೆ ನಡೆಯಲಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು