ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ 'ಸರ್ಟಿಫಿಕೇಟ್‌'ನಿಂದ ಉ.ಪ್ರದೇಶದ ಸತ್ಯ ಮರೆಮಾಚಲು ಸಾಧ್ಯವಿಲ್ಲ: ಪ್ರಿಯಾಂಕಾ

Last Updated 16 ಜುಲೈ 2021, 11:23 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೋವಿಡ್ ಎರಡನೇ ಅಲೆಯಲ್ಲಿ ಮಾಡಿರುವ ಕ್ರೌರ್ಯ, ನಿರ್ಲಕ್ಷ್ಯ ಮತ್ತು ಅಸಮರ್ಪಕ ನಿರ್ವಹಣೆಯ ಸತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರ 'ಸರ್ಟಿಫಿಕೇಟ್‌'(ಪ್ರಮಾಣಪತ್ರದಿಂದ) ನಿಂದ ಮರೆಮಾಚಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೋವಿಡ್ ಬಿಕ್ಕಟ್ಟನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದು ವಾರಾಣಸಿ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದರ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾಗ್ದಾಳಿ ನಡೆಸಿದ್ದಾರೆ.

'ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಯೋಗಿ ಸರ್ಕಾರದ ಕ್ರೌರ್ಯ, ನಿರ್ಲಕ್ಷ್ಯ ಮತ್ತು ಅಸಮರ್ಪಕ ನಿರ್ವಹಣೆಯ ಸತ್ಯವನ್ನು ಪ್ರಧಾನಿ ಅವರ ಪ್ರಮಾಣ ಪತ್ರದಿಂದ ಮರೆಮಾಚಲು ಸಾಧ್ಯವಿಲ್ಲ' ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.

'ಜನ ಸಾಮಾನ್ಯರು ಅಪಾರ ಸಂಕಷ್ಟವನ್ನು ಎದುರಿಸಿದ್ದು, ಅಸಹಾಯಕರಾಗಿದ್ದಾರೆ. ಈ ಸತ್ಯವನ್ನು ಮೋದಿ ಹಾಗೂ ಆದಿತ್ಯನಾಥ್ ಮರೆತಿರಬಹುದು. ಆದರೆ ಕೊರೊನಾ ನೋವಿನಿಂದ ಬಳಲುತ್ತಿರುವ ಜನ ಸಾಮಾನ್ಯರಿಂದ ಮರೆಯಲು ಸಾಧ್ಯವಿಲ್ಲ' ಎಂದು ಹೇಳಿದರು.

ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗಿದೆ ಎಂದು ಮೋದಿ ಅವರು ಆದಿತ್ಯನಾಥರನ್ನು ಶ್ಲಾಘಿಸಿದರು. ಉತ್ತರ ಪ್ರದೇಶದಲ್ಲಿ ಗರಿಷ್ಠ ಸಂಖ್ಯೆಯ ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜ್ಯವು ಗರಿಷ್ಠ ಮಂದಿಗೆ ಲಸಿಕೆ ನೀಡಿದೆ. ರಾಜ್ಯದಲ್ಲಿ ಉತ್ತಮ ಪರಿಸ್ಥಿತಿ ನಿರ್ಮಾಣವಾಗಿದೆ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT