ಗುರುವಾರ , ಜನವರಿ 27, 2022
27 °C

ಪ್ರಧಾನಿ ಭದ್ರತಾ ಲೋಪದ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್‌ ಸರ್ಕಾರ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಚಂಡೀಗಡ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಫಿರೋಜ್‌ಪುರ ಭೇಟಿಯ ವೇಳೆ ಉಂಟಾದ ಭದ್ರತಾ ಲೋಪಗಳ ತನಿಖೆಗಾಗಿ ಪಂಜಾಬ್ ಸರ್ಕಾರವು ಗುರುವಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.

ನ್ಯಾಯಮೂರ್ತಿ (ನಿವೃತ್ತ) ಮೆಹ್ತಾಬ್ ಸಿಂಗ್ ಗಿಲ್, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ನ್ಯಾಯಮೂರ್ತಿ ಅನುರಾಗ್ ವರ್ಮಾ ಅವರನ್ನು ಸಮಿತಿಯು ಒಳಗೊಂಡಿದೆ.

3 ದಿನಗಳಲ್ಲಿ ಸಮಿತಿಯು ವರದಿ ಸಲ್ಲಿಸಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ.

ಪಂಜಾಬ್‌ನ ಫಿರೋಜ್‌ಪುರದಲ್ಲಿ ನಡೆಯಬೇಕಿದ್ದ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ರಸ್ತೆ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ರಸ್ತೆತಡೆಯ ಕಾರಣ ಮೇಲ್ಸೇತುವೆಯಲ್ಲಿ 15–20 ನಿಮಿಷ ಸಿಲುಕಿದರು. ಮೋದಿ ಅವರು ಪಂಜಾಬ್‌ಗೆ ಭೇಟಿ ನೀಡುವುದನ್ನು ವಿರೋಧಿಸಿದ ರೈತ ಸಂಘಟನೆಯು ರಸ್ತೆತಡೆ ನಡೆಸಿತು. ಹೀಗಾಗಿ, ಮೋದಿ ತಮ್ಮ ಕಾರ್ಯಕ್ರಮವನ್ನು ರದ್ದುಪಡಿಸಿ ವಾಪಸಾದರು. ಇದು ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು