ಭಾನುವಾರ, ಸೆಪ್ಟೆಂಬರ್ 25, 2022
22 °C

ಘಟನೆ ನೆನಪಿಸಿ ಪೋಕ್ಸೊ ಸಂತ್ರಸ್ತೆಯ ಮನಸ್ಸು ಘಾಸಿಗೊಳಿಸಬಾರದು: ಹೈಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಅತ್ಯಾಚಾರಕ್ಕೊಳಗಾಗಿರುವ ಅಪ್ರಾಪ್ತೆಯು ನ್ಯಾಯಾಲಯದ ವಿಚಾರಣೆ ವೇಳೆ ಹಾಜರಿರುವ ಮೂಲಕ ಮಾನಸಿಕ ವೇದನೆ ಅನುಭವಿಸಿರುತ್ತಾಳೆ. ಆಕೆಗೆ ಇಷ್ಟವಿಲ್ಲದಿದ್ದರೆ ವಿಚಾರಣೆ ನೆಪದಲ್ಲಿ ಅತ್ಯಾಚಾರದ ಘಟನೆಯನ್ನು ಮತ್ತೆ ನೆನಪಿಸಬಾರದು. ಆ ಮೂಲಕ ಆಕೆಯ ಮನಸ್ಸನ್ನು ಘಾಸಿಗೊಳಿಸಬಾರದು’ ಎಂದು ದೆಹಲಿ ಹೈಕೋರ್ಟ್‌ ಗುರುವಾರ ಹೇಳಿದೆ.

ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಜಸ್‌ಮೀತ್‌ ಸಿಂಗ್‌ ಹೀಗೆ ಅಭಿಪ್ರಾಯಪಟ್ಟಿದ್ದಾರೆ.

‘ಸಂತ್ರಸ್ತೆಯನ್ನು ಅಪರಾಧಿಯ ಎದುರು ನಿಲ್ಲಿಸಿಕೊಂಡೇ ಆರೋಪ–ಪ್ರತ್ಯಾರೋಪಗಳನ್ನು ಮಾಡುವುದು, ಆಕೆಯ ಪ್ರಾಮಾಣಿಕತೆ ಹಾಗೂ ನಡತೆಯ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ. ಇದರಿಂದ ಆಕೆಯ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ’ ಎಂದು ಜಸ್‌ಮೀತ್‌ ಸಿಂಗ್‌ ಅವರು ಆಗಸ್ಟ್‌ 1ರ ತೀರ್ಪಿನಲ್ಲಿ ಹೇಳಿದ್ದಾರೆ.

‘ಪತ್ನಿ ಹಾಗೂ ಸಂತ್ರಸ್ತೆ ರಾಜಸ್ಥಾನದಲ್ಲಿ ನೆಲೆಸಿದ್ದು, ಅಲ್ಲಿಗೆ ಯಾವುದೇ ಕಾರಣಕ್ಕೂ ಭೇಟಿ ನೀಡಬಾರದು. ಕರೆದಾಗ ಮತ್ತೆ ವಿಚಾರಣೆಗೆ ಹಾಜರಾಗಬೇಕು’ ಎಂಬ ಷರತ್ತುಗಳೊಂದಿಗೆ ಅರ್ಜಿದಾರರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು