ಪೊಲಾವರಂ ಯೋಜನೆ: ತೆಲಂಗಾಣಗೆ ‘ಸುಪ್ರೀಂ’ ನೋಟಿಸ್

ನವದೆಹಲಿ: ಪೊಲಾವರಂ ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ತೆಲಂಗಾಣ ಸರ್ಕಾರ ಮತ್ತು ಇತರರಿಗೆ ನಿರ್ದೇಶನ ನೀಡಿದೆ.
ಈ ಯೋಜನೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ಸಮಿತಿ ನೀಡಿರುವ ಶಿಫಾರಸುಗಳನ್ನು ಒಪ್ಪಿಕೊಂಡು ಎನ್‌ಜಿಟಿ ಆದೇಶ ಹೊರಡಿಸಿತ್ತು.
ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ, ತೆಲಂಗಾಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಮತ್ತು ಅರಣ್ಯ ಸಚಿವಾಲಯ ಮತ್ತು ಕಮ್ಮಮ್ ಜಿಲ್ಲಾಧಿಕಾರಿ ಅವರನ್ನೊಳಗೊಂಡ ನಾಲ್ವರು ಸದಸ್ಯರ ಸಮಿತಿಯ ವರದಿಯನ್ನು ಎನ್‌ಜಿಟಿ 2020ರ ಸೆಪ್ಟೆಂಬರ್ 18ರಂದು ಒಪ್ಪಿಕೊಂಡಿತ್ತು.
ಎನ್ಜಿಟಿಯ ಈ ಕ್ರಮವನ್ನು ಪ್ರಶ್ನಿಸಿ ಒಡಿಶಾ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಅಭಿಪ್ರಾಯಗಳನ್ನು ಸಲ್ಲಿಸಲು ಅವಕಾಶ ನೀಡದೆಯೇ ಈ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದು ಒಡಿಶಾ ದೂರಿದೆ.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್. ನಜೀರ್ ಮತ್ತು ಕೃಷ್ಣಾ ಮುರಾರಿ ಅವರನ್ನೊಳಗೊಂಡ ಪೀಠವು ತೆಲಂಗಾಣ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿಗೊಳಿಸಿದೆ.
ತೆಲಂಗಾಣದಲ್ಲಿನ ಏತ ನೀರಾವರಿಗಾಗಿ ಪೊಲಾವರಂ ಯೋಜನೆಯನ್ನು ಕೈಗೊಳ್ಳಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.