ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು- ಕಾಶ್ಮೀರ: ನಿಷೇಧಿತ ಉಗ್ರ ಸಂಘಟನೆಗೆ ಸೇರಿದ ಏಳು ಮಂದಿಯ ಬಂಧನ

ಶೋಪಿಯಾನ್‌ ಪೊಲೀಸರ ಕಾರ್ಯಾಚರಣೆ
Last Updated 13 ಮಾರ್ಚ್ 2021, 7:14 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಗೆ ಸೇರಿದ್ದ ಏಳು ಮಂದಿ ಭೂಗತ ಕಾರ್ಯಕರ್ತರನ್ನು ಬಂಧಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

‘ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ಏಳು ಭಯೋತ್ಪಾದಕ ಸಹಚರರನ್ನು ಬಂಧಿಸಿರುವುದಾಗಿ‘ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಬಂಧಿತ ವ್ಯಕ್ತಿಗಳಿಂದ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT