ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಷ್ ಎ ಮೊಹಮ್ಮದ್ ಸಂಘಟನೆಯ ನಾಲ್ವರ ಬಂಧನ

Last Updated 27 ಡಿಸೆಂಬರ್ 2020, 10:48 IST
ಅಕ್ಷರ ಗಾತ್ರ

ಶ್ರೀನಗರ: ಪೊಲೀಸ್ ಕೆಲಸ ತೊರೆದು ಉಗ್ರಗಾಮಿಯಾಗಿದ್ದ ವ್ಯಕ್ತಿಯೂ ಸೇರಿದಂತೆ ಜೈಷ್ ಎ– ಮೊಹಮ್ಮದ್‌ ಸಂಘಟನೆಯ ನಾಲ್ವರನ್ನು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಹಯಾತ್‌ ಪೋರಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಈ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾದರು‘ ಎಂದು ಪೊಲೀಸ್ ಇಲಾಖೆ ವಕ್ತಾರರು ತಿಳಿಸಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಪೊಲೀಸ್ ಇಲಾಖೆ ಬಿಟ್ಟು ಉಗ್ರಗಾಮಿಯಾಗಿರುವ ಅಲ್ತಾಫ್ ಹುಸೇನ್, ಪುಲ್ವಾಮಾ ನಿವಾಸಿಗಳಾದ ಶಬೀರ್ ಅಹ್ಮದ್ ಭಟ್, ಜಮ್ಶೀದ್ ಮ್ಯಾಗ್ರೇ ಮತ್ತು ಜಾಹಿದ್ ದಾರ್ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.

ಈ ವರ್ಷದ ಆರಂಭದಲ್ಲಿ ಪೊಲೀಸ್ ಇಲಾಖೆ ತೊರೆದಿದ್ದ ಹುಸೇನ್, ಈಗಾಗಲೇ ಬಂಧಿತನಾಗಿದ್ದ ಉಗ್ರ ಜಹಂಗೀರ್ ಎಂಬುವವನ ಜತೆ ಸೇರಿದ್ದ. ಎಕೆ 47 ರೈಫಲ್‌ಗಳನ್ನು ಇಟ್ಟುಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

‘ಈ ಗುಂಪು ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಎಂಎಯೊಂದಿಗೆ ಸಂಬಂಧ ಹೊಂದಿದೆ. ಕೆಲವು ವಿಧ್ವಂಸಕ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ‘ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT