ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಜಹಾಂಗಿರ್‌ಪುರಿ ಹಿಂಸಾಚಾರ: ತನಿಖಾ ತಂಡದ ಮೇಲೆ ಕಲ್ಲು ತೂರಾಟ

Last Updated 18 ಏಪ್ರಿಲ್ 2022, 9:23 IST
ಅಕ್ಷರ ಗಾತ್ರ

ನವದೆಹಲಿ: ಜಹಾಂಗಿರ್‌ಪುರಿ ಹಿಂಸಾಚಾರದ ವೇಳೆ ಗುಂಡು ಹಾರಿಸಿದ್ದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಮನೆಗೆ ತೆರಳಿದ ದೆಹಲಿ ಪೊಲೀಸ್ ತನಿಖಾ ತಂಡದ ಮೇಲೆ ಸೋಮವಾರ ಕಲ್ಲು ತೂರಾಟ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೊ ತುಣುಕೊಂದರಲ್ಲಿ ನೀಲಿ ಅಂಗಿ ಧರಿಸಿದ ವ್ಯಕ್ತಿಯೊಬ್ಬ ಗುಂಡು ಹಾರಿಸುತ್ತಿರುವುದು ಕಂಡುಬಂದಿತ್ತು.

ಸಿಡಿ ಪಾರ್ಕ್‌ನಲ್ಲಿರುವ ಆರೋಪಿಯ ನಿವಾಸಕ್ಕೆ ತೆರಳಿ ಶೋಧ ನಡೆಸಲು ಮತ್ತು ಮನೆಯವರನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರ ತಂಡ ತೆರಳಿತ್ತು ಎಂದು ವಾಯವ್ಯ ದೆಹಲಿ ಡಿಸಿಪಿ ಉಷಾರಾಣಿ ತಿಳಿಸಿದ್ದಾರೆ.

‘ಆರೋಪಿಯ ಕುಟುಂಬದವರು ತನಿಖಾ ತಂಡದ ಮೇಲೆ ಕಲ್ಲು ತೂರಿದ್ದಾರೆ. ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಮಧ್ಯೆ, ಜಹಾಂಗಿರ್‌ಪುರಿ ಹಿಂಸಾಚಾರಕ್ಕೆ ಸಂಬಂಧಿಸಿ ಈರವರೆಗೆ 23 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹನುಮ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಶೋಭಾ ಯಾತ್ರೆಯಲ್ಲಿ ಶನಿವಾರ ಸಂಜೆ ಜಹಾಂಗಿರ್‌ಪುರಿ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ನಡೆದ ಕಲ್ಲುತೂರಾಟದಲ್ಲಿ ಹಲವು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು. ಉದ್ರಿಕ್ತರು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT