ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಂದ ಮಹಿಳೆಯರ ಮೇಲೆ ಲಾಠಿ ಪ್ರಹಾರ: ವ್ಯಾಪಕ ಖಂಡನೆ

Last Updated 7 ನವೆಂಬರ್ 2022, 10:17 IST
ಅಕ್ಷರ ಗಾತ್ರ

ಲಖನೌ: ಉತ್ತರಪ್ರದೇಶದಲ್ಲಿ ಮಹಿಳೆಯರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಪೊಲೀಸರ ಅತಿರೇಕದ ವರ್ತನೆ ಖಂಡಿಸಿ, ಜನರು ಸಾಮಾಜಿಕ ಜಾಲತಾಣಗಳ ಮೂಲಕ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಪೊಲೀಸರು ಮಹಿಳೆಯರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆಕಾಂಗ್ರೆಸ್‌ ಪಕ್ಷ ಖಂಡನೆ ವ್ಯಕ್ತಪಡಿಸಿದೆ.

ಅಂಬೇಡ್ಕರ್‌ ನಗರದಜಲಾಲ್‌ಪುರದಲ್ಲಿ ಕೆಲವು ದಿನಗಳ ಹಿಂದೆ ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸ ಮಾಡಲಾಗಿತ್ತು. ಇದನ್ನು ಖಂಡಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಭಾನುವಾರ ಪ್ರತಿಭಟನೆ ಮಾಡುವಾಗ ಮಹಿಳೆಯರು ವಾಹನಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಿದ್ದರು. ಈ ವೇಳೆ ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಬೇಕಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ಘಟನೆ ಸಂಬಂಧ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT