ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಶ್ರೀನಗರ: ಪೊಲೀಸರ ಮೇಲೆ ಗುಂಡು ಹಾರಿಸಿದ ಉಗ್ರರು, ಪೊಲೀಸ್ ಅಧಿಕಾರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ನಗರದ ಖನ್ಯಾರ್ ಪ್ರದೇಶದಲ್ಲಿ ಭಾನುವಾರ ನಡೆದ ಉಗ್ರರ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಮಧ್ಯಾಹ್ನ 1.35 ರ ಸುಮಾರಿಗೆ ಖನ್ಯಾರ್‌ನಲ್ಲಿ ಭಯೋತ್ಪಾದಕರು ಪೋಲಿಸರ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾರೆ. ಇದರ ಪರಿಣಾಮವಾಗಿ ಪಿಎಸ್‌ ಖನ್ಯಾರ್‌ ಪಿಎಸ್‌ಐ (ಪ್ರೊಬೇಷನರಿ ಸಬ್ ಇನ್ಸ್‌ಪೆಕ್ಟರ್) ಅರ್ಷಿದ್ ಅಹ್ಮದ್ ಗಾಯಗೊಂಡಿದ್ದಾರೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಗೊಂಡ ಅಧಿಕಾರಿಯನ್ನು ಇಲ್ಲಿನ ಎಸ್‌ಎಮ್‌ಎಚ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ದಾಳಿಕೋರರನ್ನು ಸೆರೆಹಿಡಿಯಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು