ನಂದಿಗ್ರಾಮ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಟಿಎಂಸಿ ಮುಖಂಡರಾದ ಶೇಖ್ ಸೂಫಿಯಾನ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ 341 (ದುರುದ್ದೇಶದಿಂದ ತಡೆ ಒಡ್ಡುವುದು) ಮತ್ತು 323 (ಸ್ವಯಂಪ್ರೇರಿತವಾಗಿ ಘಾಸಿಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪುರ್ಬಾ ಮೇದಿನಿಪುರ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
‘ಸೂಫಿಯಾನ್ ಅವರು ನೀಡಿದ ದೂರನ್ನು ಸ್ವೀಕರಿಸಿದ್ದೇವೆ. ಈಗಾಗಲೇ ತನಿಖೆ ನಡೆಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದೇವೆ‘ ಎಂದು ಅಧಿಕಾರಿ ಹೇಳಿದರು.