ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಜ್‌ ಮಹಲ್‌ನಲ್ಲಿ ಹನುಮಾನ್ ಚಾಲೀಸ: ಪೊಲೀಸರಿಂದ ತಡೆ

Last Updated 16 ಫೆಬ್ರುವರಿ 2022, 1:49 IST
ಅಕ್ಷರ ಗಾತ್ರ

ಆಗ್ರಾ: ತಾಜ್‌ ಮಹಲ್‌ನಲ್ಲಿ ಹನುಮಾನ್ ಚಾಲೀಸ ಪಠಿಸಲು ಮುಂದಾಗಿದ್ದ ಬಲಪಂಥೀಯ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.

ಕರ್ನಾಟಕದ ಹಿಜಾಬ್ ವಿವಾದದ ವಿರುದ್ಧ ಪ್ರತಿಭಟನೆ ಮಾಡುವ ಸಲುವಾಗಿ ವಿವಿಧ ಸಂಘಟನೆಯ ಕಾರ್ಯಕರ್ತರು ತಾಜ್ ಮಹಲ್‌ ಪ್ರವೇಶಿಸಿ ಅಲ್ಲಿ ಹನುಮಾನ್ ಚಾಲೀಸ ಪಠಿಸಲು ಉದ್ದೇಶಿಸಿದ್ದರು.

ಪ್ರತಿಭಟನಾಕಾರರು ಹಿಜಾಬ್‌ಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಅವರು ತಾಹ್ ಮಹಲ್ ಪ್ರವೇಶಿಸುವುದನ್ನು ತಡೆಯಲಾಗಿದೆ ಎಂದು ಸರ್ಕಲ್ ಅಧಿಕಾರಿ ರಾಜೀವ್ ಕುಮಾರ್ ತಿಳಿಸಿದ್ದಾರೆ.

ತಾಜ್ ಮಹಲ್ ಎನ್ನುವುದು ‘ತೇಜೋ ಮಹಲ್‘ ಆಗಿದೆ. ಹೀಗಾಗಿ ಅಲ್ಲಿ ಹನುಮಾನ್ ಚಾಲೀಸ ಪಠಿಸಲು ತೆರಳುತ್ತಿದ್ದೆವು. ಆದರೆ ಪೊಲೀಸರು ನಮ್ಮನ್ನು ತಡೆದಿದ್ದಾರೆ ಎಂದು ವಿಶ್ವ ಹಿಂದು ಪರಿಷತ್‌ನ ಅಶೀಶ್ ಆರ್ಯ ತಿಳಿಸಿದ್ದಾರೆ.

ತಾಜ್‌ ಮಹಲ್‌ನಲ್ಲಿ ಹನುಮಾನ್ ಚಾಲೀಸ ಪಠಿಸಲು ತೆರಳುತ್ತಿದ್ದ ವಿಶ್ವ ಹಿಂದು ಪರಿಷತ್, ಸೇವಾ ಭಾರತಿ ಮತ್ತು ದುರ್ಗಾ ವಾಹಿನಿಯ ಕಾರ್ಯಕರ್ತರನ್ನು ಆಗ್ರಾದ ವಿವಿಧೆಡೆ ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT