ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ನಲ್ಲಿ ಎಎಪಿ ಕಾರ್ಯಕರ್ತರ ಪ್ರತಿಭಟನೆ: ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

Last Updated 6 ಅಕ್ಟೋಬರ್ 2021, 11:48 IST
ಅಕ್ಷರ ಗಾತ್ರ

ಚಂಡೀಗಢ: ಪಂಜಾಬ್‌ನ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎಎಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿಯನ್ನು ಪ್ರಯೋಗ ಮಾಡಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ–ಖೇರಿಯಲ್ಲಿ ರೈತರ ಮೇಲೆ ನಡೆದ ಹಿಂಸಾಚಾರವನ್ನು ಖಂಡಿಸಿ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ರಾಜಭವನದ ಕಡೆಗೆ ಹೋಗುವುದನ್ನು ತಡೆಯಲು ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು.

ಎಎಪಿ ಶಾಸಕಿ ಸರವ್‌ಜಿತ್‌ ಕೌರ್‌ ಮನುಕೆ ನೇತೃತ್ವದಲ್ಲಿ ಎಎಪಿ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಮುರಿದು ರಾಜ್ಯಪಾಲರ ನಿವಾಸದ ಕಡೆಗೆ ಹೋಗುವುದಕ್ಕೆ ಮುಂದಾದರು. ಆ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರು ನಡುವೆ ಘರ್ಷಣೆ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಜಲಫಿರಂಗಿಯನ್ನು ಪ್ರಯೋಗಿಸಿದ್ದಾರೆ.

ಕೇಂದ್ರ ಸಚಿವ ಅಜಯ್‌ ಮಿಶ್ರಾ ಮತ್ತು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಅವರನ್ನು ತಡೆಯಲು ನೂರಾರು ರೈತರು ಭಾನುವಾರ ಯತ್ನಿಸಿದ್ದರು. ಈ ಗುಂಪಿನ ಮೇಲೆ ಮಿಶ್ರಾ ಅವರಿಗೆ ಸಂಬಂಧಿಸಿದ ಎಸ್‌ಯುವಿ ಕಾರು ಹರಿದು ನಾಲ್ವರು ರೈತರು ಮೃತಪಟ್ಟರು. ನಂತರ ನಡೆದ ಹಿಂಸಾಚಾರಕ್ಕೆ ನಾಲ್ವರು ಬಲಿಯಾದರು. ರೈತರ ಮೇಲೆ ಹರಿದ ಕಾರನ್ನು ಅಜಯ್‌ ಮಿಶ್ರಾ ಮಗ ಆಶಿಶ್‌ ಮಿಶ್ರಾ ಚಾಲನೆ ಮಾಡಿದ್ದರು ಎಂದು ರೈತರು ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ–ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಮತ್ತು ಸರ್ಕಾರದ ನಡುವೆ ಸೋಮವಾರ ಒಪ್ಪಂದ ಏರ್ಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ ₹45 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹10 ಲಕ್ಷ ಪರಿಹಾರ ನೀಡಲು ಸರ್ಕಾರ ಒಪ್ಪಿದೆ. ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಮಗ ಆಶಿಶ್‌ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT