ಎನ್‌ಕೌಂಟರ್: ಮೂವರು ಉಗ್ರರ ಸಾವು, ಪೊಲೀಸ್ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಬಡ್ಗಾಮ್ ಜಿಲ್ಲೆಗಳಲ್ಲಿ ಉಗ್ರರು ಮತ್ತು ಭದ್ರತಾ ಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದು, ಪೊಲೀಸರೊಬ್ಬರು ಹುತಾತ್ಮರಾಗಿದ್ದಾರೆ.
ಶೋಪಿಯಾನ್ ಜಿಲ್ಲೆಯ ಬಡ್ಗಾಮ್ನಲ್ಲಿ ಉಗ್ರರ ಇರುವಿಕೆಯನ್ನು ಅರಿತ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು. ಉಗ್ರರು ಮೊದಲು ಗುಂಡು ಹಾರಿಸಿದ್ದರಿಂದ ಭದ್ರತಾ ಪಡೆಗಳೂ ಪ್ರತಿಯಾಗಿ ಗುಂಡು ಹಾರಿಸಿದವು. ಘಟನೆಯಲ್ಲಿ ಮೂವರು ಉಗ್ರರು ಹತರಾದರು.
ಬಡ್ಗಾಮ್ ಜಿಲ್ಲೆಯ ಜನಿಗಾಂ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ತೀವ್ರವಾಗಿ ಗಾಯಗೊಂಡರು. ಈ ಪೈಕಿ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.