ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು: ಸಹೋದ್ಯೋಗಿಯನ್ನು ಗುಂಡಿಕ್ಕಿ ಕೊಂದ ಪೊಲೀಸ್‌ ಅಧಿಕಾರಿ

Last Updated 28 ಮಾರ್ಚ್ 2021, 8:23 IST
ಅಕ್ಷರ ಗಾತ್ರ

ಉಧಂಪುರ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರು ತನ್ನ ಸಹೋದ್ಯೋಗಿಯನ್ನು ಗುಂಡಿಕ್ಕಿ ಕೊಂದಿದ್ದಾರೆ.

ಈ ಘಟನೆ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಜಖಾನಿ ಚೌಕ್‌ ಚೆಕ್‌ಪೋಸ್ಟ್‌ನಲ್ಲಿ ಕಾನ್‌ಸ್ಟೆಬಲ್‌ಕಾಕಾ ರಾಮ್‌ ಮತ್ತು ವಿಶೇಷ ಪೊಲೀಸ್‌ ಅಧಿಕಾರಿ ಮನೋಹರ್‌ಲಾಲ್‌ ಅವರನ್ನು ನಿಯೋಜಿಸಲಾಗಿತ್ತು. ಯಾವುದೋ ವಿಷಯಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕೋಪಗೊಂಡ ಮನೋಹರ್‌ ಲಾಲ್‌ ಸರ್ವಿಸ್‌ ರೈಫಲ್‌ನಿಂದ ರಾಮ್‌ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ರಾಮ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ಧಾರೆ. ಸದ್ಯ ಮನೋಹರ್‌ ಲಾಲ್‌ ಅವರನ್ನು ಬಂಧಿಸಲಾಗಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT