ಶುಕ್ರವಾರ, ಮಾರ್ಚ್ 31, 2023
33 °C

ಗ್ರಾಮೀಣ ಪ್ರದೇಶದವರಿಗೂ ಗುಣಮಟ್ಟದ ವೈದ್ಯಕೀಯ ಸೇವೆ ಪಡೆಯುವ ಹಕ್ಕಿದೆ: ಸುಪ್ರೀಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಪರಿಣತ ಸಿಬ್ಬಂದಿಯಿಂದ ಗುಣಮಟ್ಟದ ಆರೋಗ್ಯ ಸೇವೆ ಪಡೆದುಕೊಳ್ಳುವ ಹಕ್ಕು ಗ್ರಾಮೀಣ ಪ್ರದೇಶದಲ್ಲಿ ನೆಲೆಸಿರುವ ನಾಗರಿಕರಿಗೂ ಇದೆ’ ಎಂದು ಸುಪ್ರೀಂ ಕೋರ್ಟ್‌ ಗುರುವಾರ ಹೇಳಿದೆ.

2004ರ ಅಸ್ಸಾಂ ಗ್ರಾಮೀಣ ಆರೋಗ್ಯ ನಿಯಂತ್ರಣ ‍ಪ್ರಾಧಿಕಾರ ಕಾಯ್ದೆಯನ್ನು ಅನೂರ್ಜಿತಗೊಳಿಸಿರುವ ಗುವಾಹಟಿ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ, ಹೈಕೋರ್ಟ್‌ ತೀರ್ಪನ್ನು ಎತ್ತಿಹಿಡಿದಿದೆ.

‘ಆಧುನಿಕ ಅಥವಾ ಅಲೋಪತಿ ವೈದ್ಯ ಪದ್ಧತಿಗಳಿಗೆ ಸಂಬಂಧಿಸಿದಂತೆ ಕಾನೂನು ಜಾರಿಗೊಳಿಸುವ ಅಧಿಕಾರ ರಾಜ್ಯದ ಶಾಸಕಾಂಗಕ್ಕೆ ಇಲ್ಲ. ಅದು ಕೇಂದ್ರೀಯ ಕಾನೂನಿನ ಮಾನದಂಡಗಳಿಗೆ ವಿರುದ್ಧವಾದುದು’ ಎಂದೂ ನ್ಯಾಯಪೀಠ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು