ನವದೆಹಲಿ: ‘ಈಗಾಗಲೇ ಕೋವಿಡ್ ಔಷಧಿಯ ಕೊರತೆಯಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ನಾಯಕರು ಕೋವಿಡ್ ಔಷಧಿಗಳನ್ನು ಸಂಗ್ರಹಿಸಬಾರದು. ಆದಷ್ಟು ಬೇಗ ಅವುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಂತಿರುಗಿಸಿ’ ಎಂದು ದೆಹಲಿ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.

‘ಇದು ಸಾರ್ವಜನಿಕರಿಗಾಗಿರುವ ಔಷಧಿ. ಇದನ್ನು ರಾಜಕೀಯಕ್ಕೆ ಬಳಸಬಾರದು. ಬಡ ಮತ್ತು ಅಗತ್ಯವಿರುವ ಜನರಿಗೆ ಉಪಯೋಗವಾಗುವಂತೆ ರಾಜಕೀಯ ನಾಯಕರು ತಮ್ಮ ಬಳಿ ದಾಸ್ತಾನು ಮಾಡಿರುವ ಕೋವಿಡ್ ಔಷಧಿಗಳನ್ನು ಆರೋಗ್ಯ ಸೇವೆಗಳ ಪ್ರಧಾನ ನಿರ್ದೇಶಕರು ಮತ್ತು ದೆಹಲಿ ಸರ್ಕಾರಕ್ಕೆ ಒಪ್ಪಿಸಬೇಕು’ ಎಂದು ಹೈಕೋರ್ಟ್ ತಿಳಿಸಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಪಿನ್ ಸಂಘಾಯಿ ಮತ್ತು ಜಸ್ಮೀತ್ ಸಿಂಗ್ ಅವರ ಪೀಠವು, ಪ್ರಕರಣ ಕುರಿತಾಗಿ ದೆಹಲಿ ಪೊಲೀಸರು ಸಲ್ಲಿಸಿರುವ ವರದಿ ಬಗ್ಗೆ ನಿರಾಶೆ ವ್ಯಕ್ತಪಡಿಸಿದೆ. ಅಲ್ಲದೆ ಈ ಬಗ್ಗೆ ಸರಿಯಾದ ತನಿಖೆ ನಡೆಸಿ, ಉತ್ತಮ ವರದಿ ಸಲ್ಲಿಸುವಂತೆ ಸೂಚಿಸಿದೆ.

ಕೋವಿಡ್ ರೋಗಿಗಳು ಔಷಧಿಯಿಲ್ಲದೆ ನರಳುತ್ತಿದ್ದಾರೆ. ಆದರೆ ದೆಹಲಿಯಲ್ಲಿ ರಾಜಕೀಯ ನಾಯಕರು ದೊಡ್ಡ ಪ್ರಮಾಣದಲ್ಲಿ ಔಷಧಿಯನ್ನು ಶೇಖರಣೆ ಮಾಡುತ್ತಿದ್ದಾರೆ ಮತ್ತು ವಿತರಣೆ ಮಾಡುತ್ತಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಈ ಸಂಬಂಧ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಹೈಕೋರ್ಟ್, ದೆಹಲಿ ಪೊಲೀಸರಿಗೆ ಸೂಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.