ಲಾಲು ನೇತೃತ್ವದ ಆರ್‌ಜೆಡಿ ಜತೆ ಎಲ್‌ಜೆಡಿ ವಿಲೀನಗೊಳಿಸಿದ ಶರದ್ ಯಾದವ್

ನವದೆಹಲಿ: ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ಅವರು ತಮ್ಮ ಪಕ್ಷ ಲೋಕತಾಂತ್ರಿಕ್ ಜನತಾ ದಳವನ್ನು (ಎಲ್‌ಜೆಡಿ) ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಜತೆ ವಿಲೀನಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಶರದ್ ಯಾದವ್ ಅವರ ದೆಹಲಿಯ ನಿವಾಸದಲ್ಲಿ ಪಕ್ಷಗಳ ವಿಲೀನದ ಬಗ್ಗೆ ಭಾನುವಾರ ಘೋಷಿಸಲಾಯಿತು ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಹಿಜಾಬ್ ತೀರ್ಪು | ಕೊಲೆ ಬೆದರಿಕೆ: ನ್ಯಾಯಮೂರ್ತಿಗಳಿಗೆ 'ವೈ' ಕೆಟಗರಿ ಭದ್ರತೆ–ಸಿಎಂ
ನಮ್ಮ ಪಕ್ಷವನ್ನು ವಿಲೀನಗೊಳಿಸಿರುವುದು ಪ್ರತಿಪಕ್ಷಗಳು ಒಗ್ಗಟ್ಟಾಗುವುದರ ಮೊದಲ ಹಂತ. ಬಿಜೆಪಿಯನ್ನು ಸೋಲಿಸುವುದಕ್ಕಾಗಿ ಭಾರತದಾದ್ಯಂತ ಎಲ್ಲ ಪ್ರತಿಪಕ್ಷಗಳು ಒಗ್ಗಟ್ಟಾಗಬೇಕಿದೆ. ಸದ್ಯಕ್ಕೆ ಇದು ನಮ್ಮ ಆದ್ಯತೆಯಾಗಿದೆ. ಆಮೇಲೆ ಪ್ರತಿಪಕ್ಷಗಳ ಮೈತ್ರಿಕೂಟವನ್ನು ಯಾರು ಮುನ್ನಡೆಸಬಹುದು ಎಂಬ ಬಗ್ಗೆ ಯೋಚಿಸಬಹುದು ಎಂದು ಶರದ್ ಯಾದವ್ ಹೇಳಿದ್ದಾರೆ.
Former Union minister Sharad Yadav merges his Loktantrik Janata Dal (LJD) with Rashtriya Janata Dal (RJD) led by Lalu Prasad Yadav at former's residence in Delhi. pic.twitter.com/zAUOaXRGrQ
— ANI (@ANI) March 20, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.