ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯರ್ಥಿಗಳ ಚುನಾವಣಾ ವೆಚ್ಚ ಮಿತಿ ಹೆಚ್ಚಳ: ಚುನಾವಣಾ ಆಯೋಗ

Last Updated 6 ಜನವರಿ 2022, 19:31 IST
ಅಕ್ಷರ ಗಾತ್ರ

ನವದೆಹಲಿ: ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿಯನ್ನು ಹೆಚ್ಚಿಸಲಾಗಿದೆ ಎಂದು ಚುನಾವಣಾ ಆಯೋಗ ಗುರುವಾರ ಹೇಳಿದೆ.

ಈ ಸಂಬಂಧ ಕಾನೂನು ಸಚಿವಾಲಯ ಹೊರಡಿಸಿರುವ ಅಧಿಸೂಚನೆಯನ್ನು ಉಲ್ಲೇಖಿಸಿ ಆಯೋಗ ಮಾಹಿತಿ ನೀಡಿದೆ.

ಲೋಕಸಭೆ ಚುನಾವಣೆಯ ಅಭ್ಯರ್ಥಿಗೆ ಈ ಮೊದಲು ನಿಗದಿಪಡಿಸಿದ್ದ ₹ 70 ಲಕ್ಷ ವೆಚ್ಚದ ಮಿತಿಯನ್ನು ₹ 95 ಲಕ್ಷಕ್ಕೆ ಹೆಚ್ಚಿಸಲಾಗಿದೆ. ವಿಧಾನಸಭೆ ಚುನಾವಣೆಯ ಅಭ್ಯರ್ಥಿಯ ವೆಚ್ಚದ ಮಿತಿಯನ್ನು ₹ 28 ಲಕ್ಷದಿಂದ ₹ 40 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಚುನಾವಣಾ ಸಮಿತಿ ಮಾಡಿದ್ದ ಶಿಫಾರಸಿನ ಅನ್ವಯ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT