ಬುಧವಾರ, ಜನವರಿ 20, 2021
17 °C

ದೆಹಲಿಯಲ್ಲಿ ಕೋವಿಡ್‌ ತೀವ್ರತೆ ಹೆಚ್ಚಿಸಿದ ಮಾಲಿನ್ಯ: ಮೋದಿಗೆ ಕೇಜ್ರಿವಾಲ್ ಮಾಹಿತಿ

ಪಿಟಿಐ Updated:

ಅಕ್ಷರ ಗಾತ್ರ : | |

Arvind Kejriwal

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್–19 ಮೂರನೇ ಅಲೆಯ ತೀವ್ರತೆ ಹೆಚ್ಚಾಗಲು ಅನೇಕ ಅಂಶಗಳು ಕಾರಣವಾಗಿವೆ. ಅವುಗಳಲ್ಲಿ ಮಾಲಿನ್ಯ ಪ್ರಮುಖವಾದದ್ದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. ಪ್ರಧಾನಿ ಜೊತೆಗಿನ ಸಭೆಯ ವೇಳೆ ಅವರು ಈ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವೆಂಬರ್ 10ರಂದು ದೆಹಲಿಯಲ್ಲಿ 8,600 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಆ ಬಳಿಕ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಾ ಬಂದಿವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: 

ಮೂರನೇ ಅಲೆಯ ತೀವ್ರತೆ ಹೆಚ್ಚಲು ಅನೇಕ ಕಾರಣಗಳಿವೆ. ಆ ಪೈಕಿ ಮಾಲಿನ್ಯ ಪ್ರಮುಖವಾದದ್ದು. ಸುತ್ತಲಿನ ರಾಜ್ಯಗಳು ಒಣಹುಲ್ಲು ಸುಡುವುದನ್ನು ನಿಲ್ಲಿಸುವಂತೆ ಮಾಡುವುದು ಮತ್ತು ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಪ್ರಧಾನಿಯವರು ಮಧ್ಯಪ್ರವೇಶ ಮಾಡಬೇಕು ಎಂಬುದಾಗಿ ಕೇಜ್ರಿವಾಲ್ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆಸ್ಪತ್ರೆಗಳಲ್ಲಿ 1,000ದಷ್ಟು ತೀವ್ರ ನಿಗಾ ಘಟಕದ ಹಾಸಿಗೆಗಳನ್ನು ಮೀಸಲಿರಿಸಬೇಕು ಎಂದೂ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಗಳವಾರ ಮಾತುಕತೆ ನಡೆಸಿದ್ದು, ಪರಿಸ್ಥಿತಿಯ ಬಗ್ಗೆ ವಿವರಣೆ ಪಡೆದಿದ್ದಾರೆ.

ಇದನ್ನೂ ಓದಿ: 

ದೆಹಲಿಯಲ್ಲಿ ಸೋಮವಾರ 4,454 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. 121 ಸೋಂಕಿತರು ಮೃತಪಟ್ಟಿದ್ದರು. ಸಾವಿನ ಸಂಖ್ಯೆ 100 ಮೀರಿರುವುದು ಕಳೆದ ಹನ್ನೆರಡು ದಿನಗಳಲ್ಲಿ ಇದು ಆರನೇ ಬಾರಿಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು