ಸೋಮವಾರ, ಮೇ 23, 2022
24 °C

ಚುನಾವಣೆ ಹಿನ್ನೆಲೆ: ತಮಿಳುನಾಡಿನಲ್ಲಿ ಪೊಂಗಲ್‌ ಆಚರಿಸಲಿರುವ ರಾಹುಲ್, ನಡ್ಡಾ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಚೆನ್ನೈ: ತಮಿಳುನಾಡಿನಲ್ಲಿ ನಡೆಯುತ್ತಿರುವ ಪೊಂಗಲ್ ಆಚರಣೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗವಹಿಸಲಿದ್ದಾರೆ. ಆ ನಂತರ ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ನಾಯಕರ ತಮಿಳುನಾಡು ಭೇಟಿಯು ಮಹತ್ವ ಪಡೆದುಕೊಂಡಿದೆ.

ತುಘಲಕ್ ಪತ್ರಿಕೆಯ 51 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾಗವಹಿಸಿ, ಭಾಷಣ ಮಾಡಲಿದ್ದಾರೆ. ಪಶ್ಚಿಮ ಚೆನ್ನೈನಲ್ಲಿ ಆಯೋಜಿಸಲಾಗಿರುವ ಪೊಂಗಲ್ ಆಚರಣೆಯಲ್ಲಿ ಪಾಲ್ಗೊಳ್ಳಲಿರುವ ನಡ್ಡಾ ರಾಜ್ಯ ನಾಯಕರೊಂದಿಗೆ ಸಭೆ ನಡೆಸುವ ನಿರೀಕ್ಷೆಯಿದೆ.

ಮಧುರೈನಲ್ಲಿ ನಡೆಯುವ ಜಲ್ಲಿಕಟ್ಟು ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಭಾಗವಹಿಸಲಿದ್ದಾರೆ.

'ಹೊಸ ಕೃಷಿ ಕಾನೂನುಗಳನ್ನು ವಿರೋಧಿಸುವ ರೈತರಿಗೆ ರಾಹುಲ್‌ ಗಾಂಧಿ ಭೇಟಿಯಿಂದ ನೈತಿಕ ಬೆಂಬಲ ಸಿಗಲಿದೆ' ಎಂದು ತಮಿಳುನಾಡು ಘಟಕದ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್.ಅಳಗಿರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಿರುಪುರ್‌ನಲ್ಲಿ ನಡೆದ ಸಾಂಪ್ರದಾಯಿಕ ‌ಪೊಂಗಲ್ ಕಾರ್ಯಕ್ರಮದಲ್ಲಿ ಆರ್‌ಎಸ್ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಮಿಳುನಾಡಿನಲ್ಲಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯು ಮುಂಬರುವ ವಿಧಾನಸಭೆ ಚುನಾವಣೆಯನ್ನು ಎದುರಿಸಲಿದೆ. ಕಾಂಗ್ರೆಸ್‌ ಪಕ್ಷವು ಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು