ಶನಿವಾರ, ಸೆಪ್ಟೆಂಬರ್ 18, 2021
29 °C

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ: ರಾಜ್ ಕುಂದ್ರಾ ಕಂಪನಿಯ ನಿರ್ದೇಶಕ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ರಾಜ್‌ ಕುಂದ್ರಾ ಅವರ ಕಂಪನಿಯೊಂದರ ನಿರ್ದೇಶಕ ಅಭಿಜಿತ್ ಬೊಂಬ್ಲೆ ಎಂಬವರನ್ನು ಮುಂಬೈ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಆ್ಯಪ್ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದಲ್ಲಿ ರಾಜ್ ಕುಂದ್ರಾ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು.

ಓದಿ: 

ರೂಪದರ್ಶಿಯೊಬ್ಬರು ನೀಡಿದ್ದ ದೂರಿನ ಆಧಾರದಲ್ಲಿ ಮಾಲ್‌ವಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಕಿರುಚಿತ್ರಗಳು ಮತ್ತು ವೆಬ್ ಸೀರೀಸ್‌ಗಳಲ್ಲಿ ನಟಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿ ಬಳಿಕ ನಗ್ನ ದೃಶ್ಯಗಳಲ್ಲಿ ನಟಿಸುವಂತೆ ಒತ್ತಡ ಹೇರಲಾಗಿತ್ತು ಎಂದು ರೂಪದರ್ಶಿ ದೂರಿನಲ್ಲಿ ತಿಳಿಸಿದ್ದರು.

ಬೊಂಬ್ಲೆ ಕೂಡ ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು