ಸೋಮವಾರ, ಮಾರ್ಚ್ 20, 2023
30 °C

ಕೇಂದ್ರ ಸಂಪುಟ ಪುನರ್‌ರಚನೆ: ರಾಜ್ಯದ 4 ಸಚಿವರಿಗೆ ಯಾವ ಖಾತೆ? ಇಲ್ಲಿದೆ ವಿವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪುನರ್‌ರಚನೆಯಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ರಾಜ್ಯ ಸಚಿವರಾಗಿ ಪದಗ್ರಹಣ ಮಾಡಿದ್ದ ರಾಜ್ಯದ ನಾಲ್ವರಿಗೂ ಖಾತೆ ಹಂಚಿಕೆ ಮಾಡಲಾಗಿದೆ.

ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆ, ಎ.ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ರಾಜೀವ್‌ ಚಂದ್ರಶೇಖರ್‌ ಅವರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ನೀಡಲಾಗಿದೆ.

ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ನಾಲ್ವರು ಸಂಸದರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು