ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲ್ಕತ್ತ: ಎರಡು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ

Last Updated 29 ಸೆಪ್ಟೆಂಬರ್ 2021, 6:43 IST
ಅಕ್ಷರ ಗಾತ್ರ

ಕೋಲ್ಕತ್ತ: ನಗರದ ಅಹಿರಿತೋಲಾ ಲೇನ್‌ನ ಉತ್ತರ ಭಾಗದಲ್ಲಿ ಎರಡು ಅಂತಸ್ತಿನ ಹಳೆಯ ಕಟ್ಟಡವೊಂದರ ಭಾಗವು ಬುಧವಾರ ಮುಂಜಾನೆ ಕುಸಿದು ಬಿದ್ದಿದ್ದು ಮಗು ಸೇರಿದಂತೆ ಇಬ್ಬರು ಅವಶೇಷಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡದ ಒಂದು ಭಾಗವು ಬೆಳಿಗ್ಗೆ 6.40ರ ಸುಮಾರಿಗೆ ಕುಸಿದಿದೆ.ತೆರವು ಕಾರ್ಯಾಚರಣೆಗೆ ವಿಪತ್ತು ನಿರ್ವಹಣೆ, ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

‘ಇದುವರೆಗೆ ನಾಲ್ಕು ಜನರನ್ನು ರಕ್ಷಿಸಲಾಗಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಮಗು ಮತ್ತು ಮತ್ತೊಬ್ಬ ವ್ಯಕ್ತಿಯನ್ನು ರಕ್ಷಿಸಲು ನಾವು ಪ್ರಯತ್ನಿಸುತ್ತಿದ್ದೇವೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT