ಶನಿವಾರ, ಜೂನ್ 19, 2021
21 °C

ಆಸ್ಪತ್ರೆ ಸೇರಲು ಪಾಸಿಟಿವ್‌ ವರದಿ ಕಡ್ಡಾಯವಲ್ಲ: ಕೇಂದ್ರ ಆರೋಗ್ಯ ಸಚಿವಾಲಯ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸರ್ಕಾರಿ ಅಥವಾ ಖಾಸಗಿ ಕೋವಿಡ್‌ ಆಸ್ಪತ್ರೆಗೆ ದಾಖಲಿಸುವಾಗ ಪಾಸಿಟಿವ್‌ ವರದಿ ಕಡ್ಡಾಯವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಸುತ್ತೋಲೆ ಹೊರಡಿಸಿದೆ.

ಸೋಂಕಿತರು ಕೋವಿಡ್ ಕೇಂದ್ರಗಳಿಗೆ ದಾಖಲಾಗುವ ಸಂಬಂಧ ಇರುವ ರಾಷ್ಟ್ರೀಯ ನೀತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಪರಿಷ್ಕರಿಸಿದ್ದು, ಇದರ ಅನ್ವಯ ಯಾವುದೇ ರೋಗಿಗೂ ಆರೋಗ್ಯ ಸೇವೆಯನ್ನು ನಿರಾಕರಿಸುವಂತಿಲ್ಲ. ಒಂದು ವೇಳೆ ರೋಗಿ ಬೇರೆ ನಗರದವರಾಗಿದ್ದರೂ ಆಮ್ಲಜನಕ ಅಥವಾ ಔಷಧಿ ಸೇರಿದಂತೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸಚಿವಾಲಯ ಹೇಳಿದೆ.

ಕೋವಿಡ್‌ನಿಂದ ಬಳಲುತ್ತಿರುವವರಿಗೆ ತ್ವರಿತ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಕ್ರಮ ಜಾರಿಗೊಳಿಸಲಾಗಿದೆ. ರೋಗಿ ಚಿಕಿತ್ಸೆ ಪಡೆಯಲು ಬಂದ ಪ್ರದೇಶದ ಗುರುತಿನ ಚೀಟಿಯನ್ನು ತೋರಿಸಲು ವಿಫಲರಾದರೂ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಸಚಿವಾಲಯ ತಿಳಿಸಿದೆ.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು