ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳಿಗಾಲದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗುವ ಸಾಧ್ಯತೆ: ವಿ.ಕೆ ಪೌಲ್‌

Last Updated 18 ಅಕ್ಟೋಬರ್ 2020, 10:41 IST
ಅಕ್ಷರ ಗಾತ್ರ

ನವದೆಹಲಿ: ಚಳಿಗಾಲದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಪ್ರಾರಂಭವಾಗುವ ಸಾಧ್ಯತೆಯನ್ನು ತಳ್ಳಿ ಹಾಕಲು ಸಾಧ್ಯವಿಲ್ಲ ಎಂದು ನೀತಿ ಆಯೋಗ ಸದಸ್ಯ ವಿ.ಕೆ ಪೌಲ್‌ ಅವರು ಭಾನುವಾರ ಹೇಳಿದರು.

ಕೋವಿಡ್‌ ಲಸಿಕೆ ಸಿದ್ಧವಾದ ಬಳಿಕ ಅದನ್ನು ಜನರಿಗೆ ಪೂರೈಸಲು ಬೇಕಾದ ಎಲ್ಲಾ ಸಂಪನ್ಮೂಲಗಳು ನಮ್ಮಲ್ಲಿವೆ. ಸೋಂಕು ಹಲವು ರಾಜ್ಯಗಳಲ್ಲಿ ಸ್ಥಿರವಾಗಿದ್ದು, ಕಳೆದ ಮೂರು ವಾರಗಳಲ್ಲಿ ಹೊಸ ಪ್ರಕರಣಗಳು ಮತ್ತು ಸಾವಿನ ಸಂಖ್ಯೆಯಲ್ಲಿ ಬಹುತೇಕ ಇಳಿಕೆಯಾಗಿದೆ. ಆದರೆ ಕೇರಳ, ಕರ್ನಾಟಕ, ರಾಜಸ್ಥಾನ, ಛತ್ತೀಸಗಢ, ಪಶ್ಚಿಮ ಬಂಗಾಳ ಮತ್ತು 3–4 ಕೇಂದ್ರಾಡಳಿತ ಪ್ರದೇಶದಲ್ಲಿ ಮಾತ್ರ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ ಎಂದು ಅವರು ಹೇಳಿದರು.

‘ಭಾರತವು ಕೊರೊನಾ ನಿಯಂತ್ರಿಸುವಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಆದರೆ ಇನ್ನೂ ಉತ್ತಮವಾಗಿ ಪರಿಸ್ಥಿತಿಯನ್ನು ನಿರ್ವಹಿಸಬೇಕಾಗಿದೆ. ಚಳಿಗಾಲದಲ್ಲಿ ಯುರೋಪ್‌‌ ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ತೀವ್ರವಾಗಿತ್ತು. ಅದೇ ರೀತಿ ಭಾರತದಲ್ಲೂ ಪ್ರಕರಣಗಳು ಹೆಚ್ಚಾಗಬಹುದು’ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT