ನವದೆಹಲಿ: ಅಂಗವಿಕಲರು ಮತ್ತು 80 ವರ್ಷಕ್ಕೂ ಮೇಲ್ಪಟ್ಟ ವೃದ್ಧರು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸುವ ಪ್ರಕ್ರಿಯೆಯನ್ನು ಚುನಾವಣಾ ಆಯೋಗ ಸರಳಗೊಳಿಸಿದೆ.

ಅಂಚೆ ಮತಪತ್ರದ ಮೂಲಕ ಮತ ಚಲಾಯಿಸುವುದನ್ನು ಆಯ್ಕೆ ಮಾಡಿಕೊಳ್ಳುವ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರಿಗೆ ಮತಗಟ್ಟೆ ಅಧಿಕಾರಿಗಳೇ ‘12–ಡಿ‘ ಅರ್ಜಿ ನಮೂನೆಯನ್ನು ಅವರ ಮನೆಗೆ ತಲುಪಿಸುತ್ತಾರೆ.

ಚುನಾವಣಾ ಅಧಿಸೂಚನೆ ಹೊರಡಿಸಿದ ಐದು ದಿನಗಳ ಒಳಗೆ ಭರ್ತಿ ಮಾಡಿದ ‘12–ಡಿ’ ಅರ್ಜಿ ನಮೂನೆ ಯನ್ನು ಮತದಾರರಿಂದ ಪಡೆದು ಚುನಾವಣಾಧಿಕಾರಿಗಳಿಗೆ ಮತಗಟ್ಟೆ ಅಧಿಕಾರಿಗಳು ತಲುಪಿಸಬೇಕು ಎಂದು ಚುನಾವಣಾ ಆಯೋಗ ಎಲ್ಲ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದೆ.

ಚುನಾವಣಾಧಿಕಾರಿಯು ನಿಯೋಜಿಸುವ ಚುನಾವಣಾ ತಂಡಗಳು ಪೂರ್ವ ನಿಗದಿಪಡಿಸಿದ ದಿನಾಂಕಗಳಂದು ಅಂಚೆ ಮತಪತ್ರವನ್ನು ತಲುಪಿಸುತ್ತವೆ. ಬಳಿಕ, ಅಂಚೆ ಮತಪತ್ರ ಪಡೆದು ಚುನಾವಣಾಧಿಕಾರಿಗಳಿಗೆ ಸಲ್ಲಿಸಲಾ ಗುತ್ತದೆ ಎಂದು ಆಯೋಗವು ತಿಳಿಸಿದೆ.

ನೌಕರಿಯಲ್ಲಿರುವವರಿಗೆ ನೀಡುವಅಂಚೆ ಮತಪತ್ರಕ್ಕೂ ಇದಕ್ಕೂ ವ್ಯತ್ಯಾಸವಿದೆ. ಇಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕಾಗುತ್ತದೆ. ಜತೆಗೆ, ಅಧಿಕಾರಿಗಳೇ ಮತಪತ್ರವನ್ನು ತಲುಪಿಸುತ್ತಾರೆ ಮತ್ತು ಪಾರದರ್ಶಕತೆಯನ್ನು ಕಾಪಾಡಲು ವಿಡಿಯೊ ಚಿತ್ರೀಕರಣ ಮಾಡಲಾಗುತ್ತದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಈ ಹೊಸ ಸೂಚನೆಯು ಎಲ್ಲ ಚುನಾವಣೆಗಳಿಗೆ ಮತ್ತು ಉಪ ಚುನಾವಣೆಗಳಿಗೆ ಅನ್ವಯವಾಗಲಿದೆ. ಕಳೆದ ವಾರ ಘೋಷಿಸಿದ 56 ವಿಧಾನಸಭಾ ಕ್ಷೇತ್ರಗಳು ಮತ್ತು ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೂ ಇದು ಜಾರಿಯಾಗಲಿದೆ ಎಂದು ಆಯೋಗ ತಿಳಿಸಿದೆ.

ಕಳೆದ ವಾರ ಬಿಹಾರಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳ ಮನವಿಗೆ ಸ್ಪಂದಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.