ಶನಿವಾರ, ಅಕ್ಟೋಬರ್ 31, 2020
20 °C

ತೈವಾನ್‌‌ ರಾಷ್ಟ್ರೀಯ ದಿನಕ್ಕೆ ಶುಭ ಹಾರೈಕೆ: ಪೋಸ್ಟರ್‌ಗಳ‌ ತೆರವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಇಲ್ಲಿನ ಚೀನಾ ರಾಯಭಾರ ಕಚೇರಿಯ ಸಮೀಪ ತೈವಾನ್‌ ರಾಷ್ಟ್ರೀಯ ದಿನಕ್ಕೆ ಶುಭ ಕೋರುವ ಪೋಸ್ಟರ್‌ಗಳನ್ನು ಹಾಕಲಾಗಿತ್ತು. ನವದೆಹಲಿ ನಗರ ಪಾಲಿಕೆಯು (ಎನ್‌ಡಿಎಂಸಿ) ಕೆಲವೇ ಗಂಟೆಗಳಲ್ಲಿ ಅವುಗಳನ್ನು ತೆರವುಗೊಳಿಸಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಬಿಜೆಪಿ ನಾಯಕ ತೇಜಿಂದರ್‌ ಪಾಲ್‌ ಸಿಂಗ್‌ ಬಗ್ಗಾ ಅವರು ಶಾಂತಿ ಪಥದ ಪಾದಚಾರಿ ಮಾರ್ಗದಲ್ಲಿ ಶುಕ್ರವಾರ ರಾತ್ರಿ ಹಾಕಿದ್ದ ಈ ಪೋಸ್ಟರ್‌ಗಳ ಮೇಲೆ ‘ತೈವಾನ್‌ ಹ್ಯಾಪಿ ನ್ಯಾಷನಲ್‌ ಡೇ– ಅಕ್ಟೋಬರ್‌ 10’ ಎಂದು ಬರೆಯಲಾಗಿತ್ತು.   

ರಾಷ್ಟ್ರೀಯ ದಿನ‌ದ ಹಿನ್ನೆಲೆಯಲ್ಲಿ ತೈವಾನ್‌ ಸರ್ಕಾರವು ಭಾರತದ ಪ್ರಮುಖ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತ ಚೀನಾ ಸರ್ಕಾರವು ಅಕ್ಟೋಬರ್‌ 7ರಂದು ಭಾರತ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿತ್ತು.

‘ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಎಲ್ಲಾ ರಾಷ್ಟ್ರಗಳು ಚೀನಾದ ‘ಏಕತಾ ಚೀನಾ’ ನೀತಿಯನ್ನು ಗೌರವಿಸಬೇಕು. ಭಾರತದ ಮಾಧ್ಯಮಗಳು ಕೂಡ ಅಲ್ಲಿನ ಸರ್ಕಾರದ ನಿರ್ಧಾರಕ್ಕೆ ಬದ್ಧವಾಗಿರಲಿವೆ ಎಂಬ ನಂಬಿಕೆ ನಮಗಿದೆ’ ಎಂದು ಪತ್ರದಲ್ಲಿ ತಿಳಿಸಲಾಗಿತ್ತು.   

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು