ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಇಇಟಿ ಪರೀಕ್ಷೆ ಮುಂದೂಡಿ: ರಾಹುಲ್ ಗಾಂಧಿ ಒತ್ತಾಯ

Last Updated 7 ಸೆಪ್ಟೆಂಬರ್ 2021, 6:14 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ(ಎನ್‌ಇಇಟಿ) ಸಂಬಂಧಿಸಿದಂತೆ ವಿದ್ಯಾರ್ಥಿಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಮುಕ್ತವಾಗಿ ಪರೀಕ್ಷೆ ಬರೆಯಲು ಸರ್ಕರ ಅವಕಾಶ ಕಲ್ಪಿಸಬೇಕು ಎಂದು ಅವರು ಟ್ವೀಟರ್‌ನಲ್ಲಿ ಒತ್ತಾಯಿಸಿದ್ದಾರೆ.

‘ಎನ್‌ಇಇಟಿ ಪರೀಕ್ಷೆ ದಿನಾಂಕವನ್ನು ಮುಂದೂಡಲು ಸಾಧ್ಯವಿಲ್ಲ. ಈ ಪ್ರಕ್ರಿಯೆಯಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ದಿನಾಂಕ ಮುಂದೂಡುವುದು ನ್ಯಾಯಸಮ್ಮತವಲ್ಲ‘ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ತಿಳಿಸಿದ ನಂತರ ರಾಹುಲ್ ಗಾಂಧಿ ಈ ರೀತಿ ಹೇಳಿದ್ದಾರೆ.

ಸೆಪ್ಟೆಂಬರ್ 12ರಂದು ದೇಶದಾದ್ಯಂತ ನೀಟ್‌–ಯುಜಿ–2021 ಪರೀಕ್ಷೆ ನಿಗದಿಯಾಗಿದೆ.

‘ಕೇಂದ್ರ ಸರ್ಕಾರ ನೀಟ್‌ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ವಿಷಯದಲ್ಲಿ ಕುರುಡಾಗಿದೆ. ಈ ಪರೀಕ್ಷೆಯ ದಿನಾಂಕವನ್ನು ಮುಂದೂಡಿ, ವಿದ್ಯಾರ್ಥಿಗಳಿಗೆ ಮುಕ್ತ ಹಾಗೂ ನ್ಯಾಯಯುತವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು‘ಎಂದು ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT