ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೆಫ್ಟಿನೆಂಟ್‌ ಗವರ್ನರ್‌ಗೆ ಹೆಚ್ಚಿನ ಅಧಿಕಾರ: ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂ

Last Updated 13 ಸೆಪ್ಟೆಂಬರ್ 2021, 7:13 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯ ಲೆಫ್ಟಿನೆಂಟ್‌ ಗವರ್ನರ್‌ ಅವರಿಗೆ ಹೆಚ್ಚಿನ ಅಧಿಕಾರ ನೀಡುವ ಹೊಸ ಕಾನೂನನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸೋಮವಾರ ಒಪ್ಪಿಗೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠವು, ‘ದೆಹಲಿ ಸರ್ಕಾರದ ಈ ಮನವಿಯನ್ನು ವಿಚಾರಣೆ ನಡೆಸುವ ವಿಷಯಗಳ ಪಟ್ಟಿಗೆ ಸೇರಿಸಲಾಗುವುದು‘ ಎಂದು ತಿಳಿಸಿತು.

ದೆಹಲಿ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಎ.ಎಂ.ಸಿಂಘ್ವಿ ಅವರು ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಪೀಠವನ್ನು ಕೋರಿದ್ದರು.

ಈ ಕಾಯ್ದೆಯು (ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ 2021) ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ನೀಡಿದ ತೀರ್ಪಿಗೆ ವಿರುದ್ಧವಾಗಿದೆ ಮತ್ತು ಆರ್ಟಿಕಲ್‌ 239ಎಎಗೆ (ದೆಹಲಿ ಸ್ಥಾನಮಾನಕ್ಕೆ ಸಂಬಂಧಿಸಿದ್ದು ) ವಿರುದ್ಧವಾಗಿದೆ‘ ಎಂದು ವಕೀಲ ಸಿಂಘ್ವಿ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT