ಭಾನುವಾರ, ಏಪ್ರಿಲ್ 18, 2021
25 °C

ಮಹಾರಾಷ್ಟ್ರ: ವಿದ್ಯುತ್ ಮಗ್ಗ ಕಾರ್ಖಾನೆಯಲ್ಲಿ ಬೆಂಕಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಠಾಣೆ: ‘ಮಹಾರಾಷ್ಟ್ರದ ಭಿವಂಡಿ ಪಟ್ಟಣದ ವಿದ್ಯುತ್ ಮಗ್ಗ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿತು’ ಎಂದು ಅಧಿಕಾರಿಗಳು ತಿಳಿಸಿದರು.

‘ನೈಗಾಂವ್ ರಸ್ತೆಯಲ್ಲಿರುವ ವಿದ್ಯುತ್ ಮಗ್ಗ ಕಾರ್ಖಾನೆಯಲ್ಲಿ ಬೆಳಿಗ್ಗೆ 2.20ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಆದರೆ, ಯಾವುದೇ ಸಾವು–ನೋವು ಸಂಭವಿಸಿಲ್ಲ’ ಎಂದು ವಿಪತ್ತು ನಿರ್ವಹಣಾ ಇಲಾಖೆಯ(ಆರ್‌ಡಿಎಂಸಿ) ಪ್ರಾದೇಶಿಕ ಮುಖ್ಯಸ್ಥ ಸಂತೋಷ್‌ ಖದಂ ಹೇಳಿದರು.

‘ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ, ಸತತ ಎರಡು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಕಾರ್ಖಾನೆಗೆ ಬೆಂಕಿ ಹೇಗೆ ತಗುಲಿತು ಎಂಬುದರ ಬಗ್ಗೆ ಇನ್ನೂ ಗೊತ್ತಾಗಿಲ್ಲ’ ಎಂದು ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು