ಪಣಜಿ: ಗೋವಾ ಮುಖ್ಯಮಂತ್ರಿ ಆಗಿ ಪ್ರಮೋದ್ ಸಾವಂತ್ ಅವರು ಎರಡನೇ ಅವಧಿಗೆಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.ಅವರ ಜೊತೆ ಎಂಟು ಶಾಸಕರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.ಪಣಜಿಯ ಡಾ. ಶ್ಯಾಮ್ ಪ್ರಸಾದ್ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಶ್ರೀಪಾದ್ ನಾಯ್ಕ್, ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಆಲೇಕರ್ ಮತ್ತು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಸಾವಂತ್ ಅವರು ಕೊಂಕಣಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ವಿಶ್ವಜಿತ್ ರಾಣೆ, ರವಿ ನಾಯ್ಕ್, ಸುಭಾಷ್ ಶಿರೋಡ್ಕರ್ ಮೊದಲಾದವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.ಸಮಾರಂಭದಲ್ಲಿ 10,000ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.