ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ನೇ ಅವಧಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಆಯ್ಕೆ

Last Updated 21 ಮಾರ್ಚ್ 2022, 13:43 IST
ಅಕ್ಷರ ಗಾತ್ರ

ಪಣಜಿ: ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಮುಂದುವರಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ನಿರ್ಧರಿಸಿದ್ದು, ಹಲವು ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ.

ಸೋಮವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮಾಹಿತಿ ನೀಡಿದ್ದಾರೆ.

'ಗೋವಾದ ಮುಖ್ಯಮಂತ್ರಿಯಾಗಿ ಮುಂದಿನ ಐದು ವರ್ಷಗಳ ವರೆಗೆ ಕೆಲಸ ಮಾಡಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಸಲ್ಲಿಸಲು ಬಯಸುತ್ತೇನೆ. ಗೋವಾದ ಜನತೆ ನನ್ನನ್ನು ಒಪ್ಪಿಕೊಂಡಿರುವುದಕ್ಕೆ ಖುಷಿಯಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಸಾಧ್ಯವಿರುವ ಎಲ್ಲ ಕೆಲಸ ಮಾಡುತ್ತೇನೆ' ಎಂದು ಪ್ರಮೋದ್ ಸಾವಂತ್ ಹೇಳಿದ್ದಾರೆ.

ಗೋವಾದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.

ಹೊಸ ಸರ್ಕಾರ ರಚನೆಗೆ ಪಕ್ಷೇತರರ ಬೆಂಬಲ ದೊರಕಿದ್ದು, ರಾಜ್ಯಪಾಲರಿಗೆ ಹೊಸ ಸರ್ಕಾರ ರಚನೆಯ ಹಕ್ಕು ಮಂಡಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT