ಶುಕ್ರವಾರ, ಜೂನ್ 18, 2021
24 °C

ಆರೋಗ್ಯದಲ್ಲಿ ಚೇತರಿಕೆ ಕಾಣದ ಪ್ರಣವ್‌ ಮುಖರ್ಜಿ : ವೈದ್ಯರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಲ್ಲಿನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯದಲ್ಲಿ ಭಾನುವಾರ ಮಹತ್ವದ ಚೇತರಿಕೆ ಕಂಡು ಬಂದಿಲ್ಲ. ಅವರಿಗೆ ವೆಂಟಿಲೇಟರ್‌ ನೆರವನ್ನು ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಶನಿವಾರ ಆಸ್ಪತ್ರೆಗೆ ಭೇಟಿ ನೀಡಿದ್ದ ಪ್ರಣವ್‌ ಅವರ ಪುತ್ರ ಅಭಿಜಿತ್‌ ಮುಖರ್ಜಿ ಅವರು, ‘ತಂದೆಯವರ ಆರೋಗ್ಯ ಅಲ್ಪಮಟ್ಟಿಗೆ ಸುಧಾರಿಸುವಂತೆ ಕಾಣುತ್ತಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.

‘ದೇವರ ಅನುಗ್ರಹ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಅವರ ಆರೋಗ್ಯ ಮೊದಲಿಗಿಂತಲೂ ತುಸು ಸುಧಾರಿಸಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಖಂಡಿತಾ ಅವರು ಗುಣಮುಖರಾಗುತ್ತಾರೆಂಬ ವಿಶ್ವಾಸವಿದೆ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು