ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಣವ್ ಮುಖರ್ಜಿ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿದೆ: ಆಸ್ಪತ್ರೆ ಪ್ರಕಟಣೆ

Last Updated 19 ಆಗಸ್ಟ್ 2020, 9:24 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಲ್ಲಿ ಶ್ವಾಸಕೋಶದ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ಬುಧವಾರ ತಿಳಿಸಿದೆ.

ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಪ್ರಣವ್ ಅವರು ದೆಹಲಿಯ ‘ಆರ್ಮಿ ರಿಸರ್ಚ್‌ ಆ್ಯಂಡ್‌ ರೆಫೆರಲ್’ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಣವ್ ಮುಖರ್ಜಿ ಅವರಿಗೆ ವೆಂಟಿಲೇಟರ್‌ ನೆರವಿನೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ನಿಗಾವಹಿಸಿದೆ ಎಂದೂ ಪ್ರಕಟಣೆ ತಿಳಿಸಿದೆ.

ಇದಕ್ಕೂ ಮುನ್ನ, ‘ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ’ ಎಂದು ಪ್ರಣವ್ ಪುತ್ರ ಅಭಿಜಿತ್ ಮುಖರ್ಜಿ ಟ್ವೀಟ್ ಮಾಡಿದ್ದರು.

84 ವರ್ಷದ ಮುಖರ್ಜಿ ಅವರು ಈ ತಿಂಗಳ 10ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗಿತ್ತು. ಶಸ್ತ್ರ ಚಿಕಿತ್ಸೆಗೂ ಮುನ್ನ ಪ್ರಣವ್ ಅವರಿಗೆ ಕೋವಿಡ್–19 ಸೋಂಕು ತಗುಲಿರುವುದೂ ದೃಢಪಟ್ಟಿತ್ತು. ಈ ಕುರಿತು ಅವರೇ, ಆಸ್ಪತ್ರೆಗೆ ದಾಖಲಾಗುವುದಕ್ಕೂ ಮುನ್ನ ಟ್ವೀಟ್ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT