ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಣವ್‌‌‌ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ

Last Updated 11 ಆಗಸ್ಟ್ 2020, 19:04 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಅವರಿಗೆ ವೆಂಟಿಲೇಟರ್‌ ನೆರವು ಒದಗಿಸಲಾಗಿದೆ ಎಂದು ಸೇನೆಯ ರೀಸರ್ಚ್ ಆ್ಯಂಡ್‌ ರೆಫರಲ್‌ (ಆರ್‌ಆ್ಯಂಡ್‌ಆರ್) ಆಸ್ಪತ್ರೆ ವೈದ್ಯರು ಮಂಗಳವಾರ ತಿಳಿಸಿದ್ದಾರೆ.

84 ವರ್ಷದ ಮುಖರ್ಜಿ ಅವರ ಮಿದುಳಿನಲ್ಲಿ ರಕ್ತಹೆಪ್ಪುಗಟ್ಟಿದ್ದ ಕಾರಣ ಇದೇ ಆಸ್ಪತ್ರೆಯಲ್ಲಿ ಅವರಿಗೆ ಸೋಮವಾರ ತುರ್ತು
ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ, ಅವರಿಗೆ ಕೋವಿಡ್‌–19 ಇರುವುದು ದೃಢಪಟ್ಟಿತ್ತು.

‘ವಿವಿಧ ವಿಭಾಗಗಳ ತಜ್ಞ ವೈದ್ಯರನ್ನು ಒಳಗೊಂಡ ತಂಡ ಮಾಜಿ ರಾಷ್ಟ್ರಪತಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ’ ಎಂದೂ ಆಸ್ಪತ್ರೆ ಮೂಲಗಳು ಹೇಳಿವೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT