ಶನಿವಾರ, ಸೆಪ್ಟೆಂಬರ್ 19, 2020
22 °C

ಅಪ್ಪ ಇನ್ನೂ ಬದುಕಿದ್ದಾರೆ; ಸುಳ್ಳು ಸುದ್ದಿ ಹಬ್ಬಿಸಬೇಡಿ: ಪ್ರಣವ್ ಮುಖರ್ಜಿ ಪುತ್ರ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

pranab mukharjee

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ವಿಧಿವಶರಾಗಿದ್ದಾರೆ #ripPranabMukherjee ಎಂದು ಹ್ಯಾಷ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಪ್ರಣವ್ ಮುಖರ್ಜಿ ಇನ್ನಿಲ್ಲ ಎಂಬ ವಿಷಯ ಟ್ವಿಟರ್‌ನಲ್ಲಿ ಟ್ರೆಂಡ್ ಆಗುತ್ತಿದ್ದಂತೆ ಪ್ರಣವ್ ಮುಖರ್ಜಿ ಪುತ್ರ ಅಭಿಜಿತ್ ಬ್ಯಾನರ್ಜಿ ನಮ್ಮ ಅಪ್ಪ ಇನ್ನೂ ಬದುಕಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಟ್ವೀಟಿಸಿದ್ದಾರೆ.

ನನ್ನ ತಂದೆ  ಪ್ರಣವ್ ಮುಖರ್ಜಿ ಇನ್ನೂ ಜೀವಂತವಾಗಿದ್ದಾರೆ ಮತ್ತು ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಹೆಸರಾಂತ ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ಊಹಾಪೋಹಗಳು ಮತ್ತು ಸುಳ್ಳು ಸುದ್ದಿಗಳು ಭಾರತದಲ್ಲಿ ಮಾಧ್ಯಮವು ಸುಳ್ಳು ಸುದ್ದಿಗಳ ಕಾರ್ಖಾನೆಯಾಗಿ ಮಾರ್ಪಟ್ಟಿದೆ ಎಂಬುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ಅಭಿಜಿತ್ ಟ್ವೀಟ್ ಮಾಡಿದ್ದಾರೆ.

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು