ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀರ್ಘ ಕೋಮಾ ಸ್ಥಿತಿಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್‌‌ ಮುಖರ್ಜಿ

Last Updated 22 ಆಗಸ್ಟ್ 2020, 8:12 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

‘ಪ್ರಣವ್‌‌ ಅವರ ಸ್ಥಿತಿಯಲ್ಲಿ ಏನೂ ಸುಧಾರಣೆಯಾಗಿಲ್ಲ. ಅವರು ದೀರ್ಘ ಕೋಮಾ ಸ್ಥಿತಿಯಲ್ಲಿದ್ದಾರೆ. ಉಸಿರಾಟ ವ್ಯವಸ್ಥೆಯ ಸುಧಾರಣೆಗಾಗಿ ಚಿಕಿತ್ಸೆ ನಡೆಯುತ್ತಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲೇ ಇದ್ದಾರೆ,’ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಮಿದುಳಿನಲ್ಲಿ ಹೆಪ್ಪುಗಟ್ಟಿದ ರಕ್ತವನ್ನು ತೆಗೆಯುವ ಶಸ್ತ್ರಚಿಕಿತ್ಸೆಗಾಗಿ ಪ್ರಣವ್‌‌ ಮುಖರ್ಜಿ ಅವರು ಆ.10ರಂದು ದೆಹಲಿಯ ಆರ್ಮಿ ರಿಸರ್ಚ್‌ ಅ್ಯಂಡ್‌ ರೆಫೆರಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ವೈರಸ್‌ ಸೋಂಕು ಇರುವುದು ದೃಢವಾಗಿತ್ತು. ಈ ವಿಚಾರವನ್ನು ಸ್ವತಃ ಪ್ರಣವ್‌‌ ಮುಖರ್ಜಿ ಅವರೇ ಟ್ವೀಟ್‌ ಮಾಡಿ ತಿಳಿಸಿದ್ದರು.

ಶಸ್ತ್ರಚಿಕಿತ್ಸೆಯ ನಂತರ ಪ್ರಣವ್‌‌ ಅವರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರ ಆರೋಗ್ಯದ ಮೇಲೆ ತಜ್ಞ ವೈದ್ಯರ ತಂಡ ತೀವ್ರ ನಿಗಾ ಇರಿಸಿದೆ.
ಪ್ರಣವ್‌‌ ಮುಖರ್ಜಿ ಅವರು 2012ರಿಂದ 2017ರ ವರೆಗೆ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT