ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿತೀಶ್ ಕುಮಾರ್ ರಾಜಕೀಯವಾಗಿ ತಿರಸ್ಕೃತ, ಬಳಲಿದ ನಾಯಕ: ಪ್ರಶಾಂತ್ ಕಿಶೋರ್

Last Updated 17 ನವೆಂಬರ್ 2020, 1:34 IST
ಅಕ್ಷರ ಗಾತ್ರ

ನವದೆಹಲಿ: ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಅವರೊಬ್ಬ ರಾಜಕೀಯವಾಗಿ ತಿರಸ್ಕೃತ, ಬಳಲಿದ ನಾಯಕನಾಗಿದ್ದು, ಬಿಹಾರವು ಇನ್ನಷ್ಟು ವರ್ಷಗಳವರೆಗೆ ನೀರಸ ಆಡಳಿತ ಅನುಭವಿಸಬೇಕಾಗಿದೆ ಎಂದು ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್‌ ಕಿಶೋರ್ ವ್ಯಂಗ್ಯವಾಡಿದ್ದಾರೆ.

‘ಬಿಜೆಪಿ ನಾಮನಿರ್ದೇಶಿತ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ರಾಜಕೀಯವಾಗಿ ತಿರಸ್ಕೃತ, ಬಳಲಿದ ನಾಯಕ ಮುಖ್ಯಮಂತ್ರಿಯಾಗಿರುವುದರಿಂದ ಬಿಹಾರವು ಇನ್ನಷ್ಟು ವರ್ಷಗಳ ಕಾಲ ನೀರಸ ಆಡಳಿತ ಅನುಭವಿಸಬೇಕಾಗಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬಿಹಾರ ಮುಖ್ಯಮಂತ್ರಿಯಾಗಿ ಏಳನೇ ಬಾರಿಗೆ ನಿತೀಶ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಿಶೋರ್ ಈ ಟ್ವೀಟ್ ಮಾಡಿದ್ದಾರೆ.

ಅತ್ಯಂತ ಆಪ್ತರಾಗಿದ್ದ ನಿತೀಶ್ ಮತ್ತು ಕಿಶೋರ್ ಬಾಂಧವ್ಯ ಹಳಸಿತ್ತು. ಜೆಡಿಯು ಉಪಾಧ್ಯಕ್ಷರಾಗಿದ್ದ ಕಿಶೋರ್ ಅವರನ್ನು ಜನವರಿಯಲ್ಲಿ ಪಕ್ಷದಿಂದಲೇ ಉಚ್ಚಾಟನೆ ಮಾಡಲಾಗಿತ್ತು.

ಕಿಶೋರ್ ಅವರು ಕೆಲವು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT