ಭಾನುವಾರ, ಮಾರ್ಚ್ 26, 2023
21 °C

ಸಿಎಂ ಸ್ಥಾನಕ್ಕೆ ಸುಖು ಹೆಸರು ಕೇಳಿ ಬರುತ್ತಲೇ ಸಿಡಿದ ಪ್ರತಿಭಾ ಸಿಂಗ್‌ ಬೆಂಬಲಿಗರು

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಶಿಮ್ಲಾ: ಹಿಮಾಚಲ ಪ್ರದೇಶ ಚುನಾವಣೆಯ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಸುಖ್ವಿಂದರ್ ಸಿಂಗ್ ಸುಖು ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ವರದಿಗಳು ಪ್ರಕಟವಾಗುತ್ತಲೇ, ಸಿಎಂ ಸ್ಥಾನದ ಆಕಾಂಕ್ಷಿ ಪ್ರತಿಭಾ ಸಿಂಗ್‌ ಅವರ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.

ಹಿಮಾಚಲ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆಯೂ ಆಗಿರುವ ಪ್ರತಿಭಾ ಸಿಂಗ್‌ ಅವರಿಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಅವರ ಬೆಂಗಾವಲು ವಾಹನವನ್ನು ಒಬೆರಾಯ್ ಸೆಸಿಲ್ ಬಳಿ ತಡೆದಿದ್ದ ಪ್ರತಿಭಾ ಸಿಂಗ್‌ ಬೆಂಬಲಿಗರು ಅವರ ಪರ ಘೋಷಣೆಗಳನ್ನು ಕೂಗಿದ್ದರು. ಭೂಪೇಶ್‌ ಬಘೇಲ್‌ ಅವರು ರಾಜ್ಯಕ್ಕೆ ವೀಕ್ಷಕರಾಗಿ ಆಗಮಿಸಿದ್ದಾರೆ.

ಪ್ರತಿಭಾ ಸಿಂಗ್‌ ಅವರು ಹಿಮಾಚಲ ಪ್ರದೇಶದ ಮಾಜಿ ಸಿಎಂ, ದಿವಂಗತ ವೀರಭದ್ರ ಸಿಂಗ್‌ ಅವರ ಪತ್ನಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು