ಪ್ರಯಾಗ್‌ರಾಜ್ (ಉತ್ತರ ಪ್ರದೇಶ): ಉಮೇಶ್ ಪಾಲ್ ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಮಾಜವಾದಿ ಪಕ್ಷದ ಮಾಜಿ ಸಂಸದ ಮತ್ತು ಪಾತಕಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅವರನ್ನು ತಪ್ಪಿತಸ್ಥರೆಂದು ಪ್ರಯಾಗರಾಜ್ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
ಅತೀಕ್ ಅಹ್ಮದ್‌ಗೆ ಜೀವಾವಧಿ ಶಿಕ್ಷೆ ಸೇರಿದಂತೆ ₹5,000 ದಂಡ ವಿಧಿಸಿರುವುದಾಗಿ ನ್ಯಾಯಾಲಯ ತಿಳಿಸಿದೆ.
ಪ್ರಕರಣದಲ್ಲಿ ಅತೀಕ್ ಅಹ್ಮದ್, ದಿನೇಶ್ ಪಾಸಿ ಮತ್ತು ಖಾನ್ ಸೌಲತ್ ಹನೀಫ್ ಅವರನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದೆ. ಅತೀಕ್ ಅಹ್ಮದ್ ಸಹೋದರ ಅಶ್ರಫ್ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.
ಉಮೇಶ್ ಪಾಲ್ ಅವರು ಬಿಎಸ್‌ಪಿಯ ಮಾಜಿ ಶಾಸಕ ರಾಜು ಪಾಲ್ ಅವರ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದರು.
ಅತೀಕ್ ಅಹ್ಮದ್ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 17ರಂದು ಮುಂದೂಡಿತ್ತು.
‘ಮುಖ್ಯ ನ್ಯಾಯಮೂರ್ತಿ ಎದುರು ತುರ್ತು ವಿಚಾರಣೆಗೆ ಪ್ರಸ್ತಾಪಿಸಿದ ನಂತರ ವಿಷಯವನ್ನು ಪಟ್ಟಿ ಮಾಡಲಾಗಿತ್ತು. ವಕೀಲರು ಸಮಯ ಕೋರಿದ್ದಾರೆ. ಒಂದು ವಾರದ ನಂತರ ಪಟ್ಟಿ ಮಾಡಿ’ ಎಂದು ಪೀಠ ಹೇಳಿತ್ತು.
ಪ್ರಸ್ತುತ ಗುಜರಾತ್‌ನ ಅಹಮದಾಬಾದ್ ಕೇಂದ್ರ ಕಾರಾಗೃಹದಲ್ಲಿರುವ ಅಹ್ಮದ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಧಾನಸಭೆಯಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. ತನ್ನನ್ನು ನಾಶಪಡಿಸಲು ಮತ್ತು ತನ್ನ ಕುಟುಂಬ ಸದಸ್ಯರ ಜೀವಕ್ಕೆ ಬೆದರಿಕೆ ಇದೆ ಎಂದು ಹೇಳಿದ್ದರು.
ಪೊಲೀಸ್ ಕಸ್ಟಡಿ ಅಥವಾ ವಿಚಾರಣೆಯ ಸಮಯದಲ್ಲಿ ತನಗೆ ಯಾವುದೇ ರೀತಿಯಲ್ಲಿ ದೈಹಿಕ ಗಾಯ ಅಥವಾ ಹಾನಿಯಾಗದಂತೆ ನೋಡಿಕೊಳ್ಳಲು ನಿರ್ದೇಶನಗಳನ್ನು ಅತೀಕ್ ಕೋರಿದ್ದರು.
ಈ ಎಲ್ಲಾ ಬೆಳವಣಿಗೆಗಳ ನಡುವೆ ಅತೀಕ್ ಅಹ್ಮದ್‌ನ ಸಹಚರನ ಮನೆಯನ್ನು ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.