ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಿಣಿಯರಿಗೆ ಸದ್ಯ ಲಸಿಕೆ ನೀಡಬೇಡಿ: ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಸೂಚನೆ

Last Updated 15 ಜನವರಿ 2021, 12:55 IST
ಅಕ್ಷರ ಗಾತ್ರ

ನವದೆಹಲಿ: ‘ಗರ್ಭಿಣಿಯರು, ಹಾಲುಣಿಸುವ ಬಾಣಂತಿಯರನ್ನು ಕೋವಿಡ್‌–19 ಲಸಿಕೆ ಪ್ರಯೋಗಕ್ಕೆ ಒಳಪಡಿಸದ ಕಾರಣ ಸದ್ಯ ಅವರಿಗೆ ಲಸಿಕೆ ನೀಡಬಾರದು’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಸೂಚನೆ ನೀಡಿದೆ.

ಈ ಕುರಿತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಸಚಿವಾಲಯ, ತುರ್ತು ಸಂದರ್ಭಗಳಲ್ಲಿ 18 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಲಸಿಕೆ ನೀಡಬೇಕು. ಅಗತ್ಯವಿದ್ದಲ್ಲಿ, ಕೋವಿಡ್‌–19 ಹಾಗೂ ಇತರ ಲಸಿಕೆಗಳನ್ನು ನಡುವೆ 14 ದಿನ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದೆ.

ಎರಡು ಪ್ರತ್ಯೇಕ ಕೋವಿಡ್‌–19 ಲಸಿಕೆಗಳನ್ನು ನೀಡಬಾರದು ಎಂದು ಸೂಚಿಸಿರುವ ಸಚಿವಾಲಯವು, ಎರಡನೇ ಡೋಸ್‌ ನೀಡುವ ಸಂದರ್ಭದಲ್ಲೂ ಮೊದಲು ಯಾವ ಕಂಪನಿ ಲಸಿಕೆ ನೀಡಲಾಗಿತ್ತೋ, ಅದನ್ನೇ ನೀಡಬೇಕು ಎಂದು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮನೋಹರ್‌ ಅಗ್ನಾನಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT