ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ: 4 ತಿಂಗಳ ಬಳಿಕ ಎಫ್‌ಐಆರ್‌

Last Updated 8 ನವೆಂಬರ್ 2022, 14:10 IST
ಅಕ್ಷರ ಗಾತ್ರ

ಪಿಲಿಭಿತ್‌, ಉತ್ತರಪ್ರದೇಶ:ಗರ್ಭಿಣಿಯೊಬ್ಬರು ಪತಿಗೆ ಮಧ್ಯಾಹ್ನದ ಊಟ ನೀಡಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಆಕೆಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಸುನಗಢಿ ಪೊಲೀಸ್‌ ಠಾಣೆಯ ಪ್ರಭಾರಿ ಅಧಿಕಾರಿ ಮದನ್‌ ಮೋಹನ್‌ ಚತುರ್ವೇದಿ ಮಂಗಳವಾರ ತಿಳಿಸಿದ್ದಾರೆ.

ಈ ಘಟನೆ ನಡೆದು ಸುಮಾರು ನಾಲ್ಕು ತಿಂಗಳ ನಂತರ ಪೊಲೀಸರು ಕೋರ್ಟ್‌ ಆದೇಶದ ಮೇರೆಗೆ ಪ್ರಕರಣ ದಾಖಲಿಸಿದ್ದಾರೆ.

‘ಈ ವರ್ಷದ ಜುಲೈ 16ರಂದು ತಮ್ಮ ಹಳ್ಳಿಯ ಇಬ್ಬರು ವ್ಯಕ್ತಿಗಳು ಕಬ್ಬಿನ ಗದ್ದೆಗೆ ಎಳೆದೊಯ್ದು, ಚಾಕುವಿನಿಂದ ಬೆದರಿಸಿ ಅತ್ಯಾಚಾರ ಮಾಡಿದ್ದಾರೆ. ಘಟನೆ ಬಳಿಕ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ದೂರು ನೀಡಿದರೂ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಎಫ್‌ಐಆರ್‌ ಸಹ ದಾಖಲಿಸಲಿಲ್ಲ. ನಂತರ ಕೋರ್ಟ್‌ ಮೆಟ್ಟಿಲೇರಬೇಕಾಯಿತು’ ಎಂದು ಸಂತ್ರಸ್ತೆಯು ದೂರಿನಲ್ಲಿ ತಿಳಿಸಿದ್ದಾರೆ.

‘ಮಹಿಳೆಗೆ ಗರ್ಭಪಾತವಾಗಿದೆ. ತನಿಖೆ ಬಳಿಕ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಚತುರ್ವೇದಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT