ಶುಕ್ರವಾರ, ಜುಲೈ 1, 2022
28 °C

ರಾಜ್ಯದ ನೀತಿ ಪ್ರಕಾರ ಅಪರಾಧಿಯ ಬಿಡುಗಡೆ ಪರಿಗಣಿಸಿ: ಸುಪ್ರೀಂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಅಪರಾಧ ಎಸಗಿದ ರಾಜ್ಯದಲ್ಲಿ ಅನ್ವಯವಾಗುವ ನೀತಿಯ ಪ್ರಕಾರ ಅಪರಾಧಿಯ ಅವಧಿಪೂರ್ವ ಬಿಡುಗಡೆಯನ್ನು ಪರಿಗಣಿಸಬೇಕೇ ಹೊರತು ವಿಚಾರಣೆಯನ್ನು ವರ್ಗಾಯಿಸಿ ಮುಕ್ತಾಯಗೊಳಿಸಿದ ಸ್ಥಳವನ್ನು ಆಧರಿಸಿ ಅಲ್ಲ  ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ವಿಕ್ರಮ್ ನಾಥ್ ಅವರನ್ನೊಳಗೊಂಡ ನ್ಯಾಯಪೀಠವು, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ  (ಸಿಆರ್‌ಪಿಸಿ) 1973, ಸೆಕ್ಷನ್ 432 (7) ಅನ್ನು ಉಲ್ಲೇಖಿಸಿ ಪ್ರಕರಣವೊಂದರ ವಿಚಾರಣೆ ವೇಳೆ ಈ ರೀತಿಯಾಗಿ ಅಭಿಪ್ರಾಯಪಟ್ಟಿದೆ.

ಶಿಕ್ಷೆಯ ಸಮಯದಲ್ಲಿ ಅಸ್ತಿತ್ವದಲ್ಲಿದ್ದ ಕಾಯ್ದೆಯ ಅಡಿಯಲ್ಲಿ ಅವಧಿಪೂರ್ವ ಬಿಡುಗಡೆಗಾಗಿ ತನ್ನ ಅರ್ಜಿಯನ್ನು ಪರಿಗಣಿಸಲು ಗುಜರಾತ್ ರಾಜ್ಯಕ್ಕೆ ನಿರ್ದೇಶನವನ್ನು ಕೋರಿ ಅಪರಾಧಿಯೊಬ್ಬರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು