ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

63 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

Last Updated 29 ಮಾರ್ಚ್ 2022, 5:08 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ಕಲ್ಯಾಣ್ ಸಿಂಗ್ ಮತ್ತು ನಟ ವಿಕ್ಟರ್ ಬ್ಯಾನರ್ಜಿ ಸೇರಿ 63ಗಣ್ಯ ವ್ಯಕ್ತಿಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.

ಈ ವರ್ಷದ ಮಾರ್ಚ್ 21 ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ನಡೆದ ಮೊದಲ ಕಾರ್ಯಕ್ರಮದಲ್ಲಿ 54 ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿತ್ತು.

ಎರಡನೇ ಸಮಾರಂಭದಲ್ಲಿ ಪದ್ಮವಿಭೂಷಣ ಪುರಸ್ಕೃತರಲ್ಲಿ ಶಾಸ್ತ್ರೀಯ ಸಂಗೀತ ಗಾಯಕಿ ಪ್ರಭಾ ಅತ್ರೆ.ಉತ್ತರ ಪ್ರದೇಶದ ಇಟಾಹ್‌ನಿಂದ ಲೋಕಸಭೆ ಸಂಸದರಾಗಿರುವ ರಾಜವೀರ್‌ ಸಿಂಗ್‌, ನಟ ವಿಕ್ಟರ್ ಬ್ಯಾನರ್ಜಿ, ಕೋವಿಡ್ ಲಸಿಕೆ ತಯಾರಕಾ ಸಂಸ್ಥೆ ಭಾರತ್ ಬಯೋಟೆಕ್‌ನ ಕೃಷ್ಣಮೂರ್ತಿ ಎಲ್ಲ, ಸುಚಿತ್ರಾ ಕೃಷ್ಣ ಎಲ್ಲ, ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಮತ್ತು ಗೂಗಲ್ ಸಿಇಒ ಸುಂದರ್ ಪಿಚೈ ಸೇರಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಲ್ಲಿ ದೇಶದ ಮೊದಲ ವೈಯಕ್ತಿಕ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಸೇರಿದ್ದಾರೆ.

ಈ ವರ್ಷ, ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಭಾರತ ರತ್ನ’ಕ್ಕೆ ಯಾವುದೇ ಹೆಸರನ್ನು ಘೋಷಿಸಲಾಗಿಲ್ಲ,

ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತಿತರರು ಉಪಸ್ಥಿತರಿದ್ದರು.

ಈ ವರ್ಷ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT