ಶನಿವಾರ, ಜನವರಿ 28, 2023
24 °C

ಹೊಸ ವರ್ಷದ ಸಂದೇಶ: ಸಂತೋಷ– ಯಶಸ್ಸು ಸಿಗಲೆಂದು ಹಾರೈಸಿದ ಮುರ್ಮು, ಮೋದಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

‘2023ರ ವರ್ಷವು ನಮ್ಮ ಜೀವನದಲ್ಲಿ ಹೊಸ ಸ್ಫೂರ್ತಿ, ಗುರಿ ಮತ್ತು ಸಾಧನೆಯನ್ನು ತರಲಿ. ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಅಂತರ್ಗತ ಅಭಿವೃದ್ಧಿಗೆ ನಮ್ಮನ್ನು ನಾವು ಸಮರ್ಪಿಸಿಕೊಳ್ಳಲು ಸಂಕಲ್ಪ ಮಾಡೋಣ’ ಎಂದು ಮುರ್ಮು ಟ್ವೀಟ್ ಮಾಡಿದ್ದಾರೆ.

‘2023ರ ವರ್ಷ ನಿಮ್ಮ ಪಾಲಿಗೆ ಭರವಸೆ, ಸಂತೋಷ ಮತ್ತು ಬಹಳಷ್ಟು ಯಶಸ್ಸಿನಿಂದ ಕೂಡಿರಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸಿಗುವಂತಾಗಲಿ ಎಂದು ಆಶಿಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘2023ರಲ್ಲಿ ಪ್ರತಿ ಬೀದಿ, ಪ್ರತಿ ಹಳ್ಳಿ, ಪ್ರತಿ ನಗರದಲ್ಲಿ ಪ್ರೀತಿಯನ್ನು ಹಂಚುವ ಅಂಗಡಿ ತೆರೆಯಲಿದೆ ಎಂದು ಆಶಿಸುತ್ತೇನೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು