ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಮಮತಾ ಸಭೆಯಲ್ಲಿ ಪ್ರಮುಖ ವಿರೋಧ ‍ಪಕ್ಷಗಳು ಭಾಗಿ

ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಈ ಸಭೆಯು ನವದೆಹಲಿಯ ಕಾನ್ಸ್‌ಟಿಟ್ಯೂಷನ್ ಕ್ಲಬ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭವಾಗಿದೆ.

ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್, ಶಿವಸೇನಾ, ಎನ್‌ಸಿಪಿ, ಆರ್‌ಜೆಡಿ, ಎಸ್‌ಪಿ, ಜೆಡಿಎಸ್‌, ಸಿಪಿಐ, ಆರ್‌ಎಸ್‌ಪಿ, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಜೆಡಿಎಸ್‌, ಡಿಎಂಕೆ, ಆರ್‌ಎಲ್‌ಡಿ ಹಾಗೂ ಜೆಎಮ್‌ಎಮ್‌ ಸೇರಿದಂತೆ 17 ಪಕ್ಷಗಳು ಈ ಸಭೆಯಲ್ಲಿ ಭಾಗವಹಿಸಿವೆ.

ಎಚ್‌.ಡಿ.ದೇವೇಗೌಡ, ಶರದ್‌ ಪವಾರ್‌, ಮಲ್ಲಿಕಾರ್ಜುನ ಖರ್ಗೆ, ಜೈರಾಮ್‌ ರಮೇಶ್‌, ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಪ್ರಮುಖ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಟಿಆರ್‌ಎಸ್‌, ಎಎಪಿ, ಅಕಾಲಿದಳ ಹಾಗೂ ಬಿಜೆಡಿ ಪಕ್ಷಗಳು ಈ ಸಭೆಗೆ ಗೈರಾಗಿವೆ. ಮೂಲಗಳ ಪ್ರಕಾರ, ಕಾಂಗ್ರೆಸ್ ಜೊತೆ ವೇದಿಕೆ ಹಂಚಿಕೊಳ್ಳಲು ಟಿಆರ್‌ಎಸ್ ಸಮ್ಮತಿಸಿಲ್ಲ.

‘ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಘೋಷಿಸಿದ ನಂತರವೇ ಈ ವಿಚಾರವಾಗಿ ತೀರ್ಮಾನಿಸಲಾಗುವುದು’ ಎಂದು ಎಎಪಿ ತಿಳಿಸಿದೆ.

ಜುಲೈ 18 ರಂದು ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT