ಸೋಮವಾರ, ಮಾರ್ಚ್ 27, 2023
32 °C

ದೇಶದ 15ನೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಶುಭಾಶಯಗಳ ಮಹಾಪೂರ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಒಡಿಶಾದ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮುರ್ಮು ಅವರಿಗೆ ಸಾಮಾಜಿಕ ಮಾಧ್ಯಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಸಂಸತ್ ಭವನದ 63ನೇ ಕೊಠಡಿಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಮೂರನೇ ಸುತ್ತಿನ ಎಣಿಕೆಯ ಬಳಿಕ ಒಟ್ಟು ಮತಗಳ ಅರ್ಧದಷ್ಟು ಮತಗಳನ್ನು ದ್ರೌಪದಿ ಮುರ್ಮು ಗಳಿಸಿರುವುದಾಗಿ ಚುನಾವಣಾ ಅಧಿಕಾರಿ ಪಿ.ಸಿ. ಮೋದಿ ತಿಳಿಸಿದ್ದಾರೆ. ಗೆಲುವಿನ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.

ಇದನ್ನೂ ಓದಿ: 

ಹೀಗಾಗಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ದ್ರೌಪದಿ ಮುರ್ಮು ಉಳಿದುಕೊಂಡಿರುವ ನಿವಾಸಕ್ಕೆ ತೆರಳಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವರಾದ ಪಲ್ಹಾದ್‌ ಜೋಶಿ, ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಆರಗ ಜ್ಞಾನೇಂದ್ರ, ಮುರುಗೇಶ್‌ ನಿರಾಣಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಇನ್ನಿತರ‌ ನಾಯಕರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಕೋರಿದ್ದಾರೆ.

Koo App
ಪ್ರಥಮ ಬುಡಕಟ್ಟು ಮಹಿಳಾ ರಾಷ್ಟ್ರಪತಿಯನ್ನು ಚುನಾಯಿಸಿದ ಭಾರತ ಸಾಮಾನ್ಯ ಹಿನ್ನಲೆಯಿಂದ ಬಂದು ಇಂದು ರಾಷ್ಟ್ರದ ಉನ್ನತ ಹುದ್ದೆಯನ್ನು ಅಲಂಕರಿಸುತ್ತಿರುವ ಶ್ರೀಮತಿ ದ್ರೌಪದಿ ಮುರ್ಮು ಅವರು ಭಾರತದ ವೈವಿಧ್ಯತೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯ ಪ್ರತೀಕವಾಗಿದ್ದಾರೆ. ಭಾರತದ ಪ್ರಥಮ ಪ್ರಜೆಯಾಗಿ ಆಯ್ಕೆಗೊಂಡ ಅವರಿಗೆ ಹಾರ್ದಿಕ ಶುಭಾಶಯಗಳು.

- Pralhad Joshi (@joshipralhad) 21 July 2022

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು