ನವದೆಹಲಿ:ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳು ಒಮ್ಮತದಿಂದ ಆಯ್ಕೆ ಮಾಡಿರುವ ಅಭ್ಯರ್ಥಿ ಯಶವಂತ ಸಿನ್ಹಾಗೆ ಕೇಂದ್ರ ಸರ್ಕಾರ ‘ಝಡ್’ ಶ್ರೇಣಿಯ ಭದ್ರತೆ ಒದಗಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಸಿನ್ಹಾ ಅವರಿಗೆ ಭದ್ರತೆ ಒದಗಿಸುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆಗೆ (ಸಿಆರ್‌ಪಿಎಫ್) ಕೇಂದ್ರ ಗೃಹ ಸಚಿವಾಲಯ ಸೂಚಿಸಿದ ಬೆನ್ನಲ್ಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಎಂಟರಿಂದ ಹತ್ತು ಮಂದಿ ಸಶಸ್ತ್ರ ಸಿಬ್ಬಂದಿ ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಸಿನ್ಹಾಗೆ ಭದ್ರತೆ ಒದಗಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಿನ್ಹಾ ಅವರು ಜೂನ್ 27ರಂದು ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.
ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಕೇಂದ್ರ ಸರ್ಕಾರ ಈಗಾಗಲೇ ‘ಝಡ್ ಪ್ಲಸ್’ ಶ್ರೇಣಿಯ ಭದ್ರತೆ ಒದಗಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.